KARNATAKA
ರಾಜಕೀಯ ನಿವೃತ್ತಿ ಘೋಷಿಸಿದ ಕಾಂಗ್ರೇಸ್ ಶಾಸಕ ತನ್ವೀರ್ ಸೇಠ್
ಮೈಸೂರು ಫೆಬ್ರವರಿ 28: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಕಾಂಗ್ರೇಸ್ ಗೆ ದೊಡ್ಡ ಪೆಟ್ಟು ಬಿದ್ದಿದ್ದು. ಮೈಸೂರು ಭಾಗದ ಪ್ರಮುಖ ಮುಖಂಡ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ.
ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದ್ರೆ ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
You must be logged in to post a comment Login