Connect with us

LATEST NEWS

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಪೋರ್ಸ್

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಪೋರ್ಸ್

ಉಡುಪಿ, ಜೂನ್ 4 : ಪ್ರಸಕ್ತ ಸಾಲಿನ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪ್ರತಿ ಪಂಚಾಯತ್‍ನಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಪ್ರಾಥಮಿಕ ಹಂತದಲ್ಲೇ ಸಮಸ್ಯೆಗಳನ್ನು ನಿಭಾಯಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ. ಇವರ ಜೊತೆ ಜೊತೆಗೆ ನೋಡಲ್ ಅಧಿಕಾರಿಗಳಿದ್ದು ಮೂಲ ಸೌಕರ್ಯಗಳನ್ನು ಪರಿಸ್ಥಿತಿಯನ್ನು ನಿಭಾಯಿಸಲು ಒದಗಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಹೇಳಿದರು.

ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ 2018ನೇ ಸಾಲಿನ ಮುಂಗಾರು ಮಳೆ ಸಂಬಂಧ ಹವಾಮಾನ ಇಲಾಖಾ ಮುನ್ಸೂಚನೆ ಆಧರಿಸಿ ಮಳೆ ಹಾನಿ ಹಾಗೂ ಮುಂಜಾಗ್ರತೆ ಹಾಗೂ ರಕ್ಷಣಾ ಕ್ರಮಗಳ ಬಗ್ಗೆ ಚರ್ಚಿಸಲು ಪೂರ್ವ ಸಿದ್ದತಾ ಸಭೆಯನ್ನು ಆಯೋಜಿಸಿ ಮಾತನಾಡುತ್ತಿದ್ದರು.

ನಗರ ಪ್ರದೇಶ ವ್ಯಾಪ್ತಿಯಲ್ಲಿ ತಗ್ಗು ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಇಲ್ಲಿ ವಾಸಿಸುವ ಜನರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕೆಂದ ಅಪರ ಜಿಲ್ಲಾಧಿಕಾರಿಗಳು, ಈ ಸಂಬಂಧ ಅಧಿಕಾರಿಗಳು ಸೂಕ್ತ ಮಾಹಿತಿ ನೀಡುವಂತೆ ನಗರಸಭೆ ಆಯುಕ್ತರಾದ ಜನಾರ್ಧನ್ ಅವರಿಗೆ ಹೇಳಿದರು.

ಹವಾಮಾನ ಇಲಾಖೆ ಮುನ್ಸೂಚನೆಯನ್ನು ಅಧಿಕಾರಿಗಳಿಗೆ ನೀಡಲಾಗುತ್ತಿದ್ದು, ಕಚೇರಿ ಮುಖ್ಯಸ್ಥರು ಕೇಂದ್ರ ಸ್ಥಾನ ಬಿಡದಂತೆ ಸೂಚಿಸಿದ ಅವರು, ಜನರು ಅಗತ್ಯ ಬಿದ್ದಲ್ಲಿ ಟೋಲ್ ಫ್ರೀ ನಂಬರ್ 1077 ಮತ್ತು 2574802 ಸಂಖ್ಯೆಗೆ ಕರೆ ಮಾಡಿ ಎಂದರು.
ಈಗಾಗಲೇ ಸಮಸ್ಯೆ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸಿ ಎಂದರು. ಕಳೆದ ವಾರ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಪರಿಹಾರ ವಿತರಣೆಗೆ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದರು. ಎಲ್ಲ ಅಧಿಕಾರಿಗಳು ಜಾಗೃತರಾಗಿರುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *