KARNATAKA
ವಾಟ್ಸ್ಆ್ಯಪ್ ಮೂಲಕ ಬಿಜೆಪಿಗೆ BJP ಗೆ ಟಾಟಾ ಬೈ ಬೈ, ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್..!
ಬೆಂಗಳೂರು : ವಾಟ್ಸ್ಆ್ಯಪ್ ಮೂಲಕ ಬಿಜೆಪಿಗೆ BJP ಗೆ ಟಾಟಾ ಬೈ ಬೈ ಮಾಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ.
ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಕಾಣಿಕೊಂಡು ಅಚ್ಚರಿ ಮೂಡಿಸಿದ ಸಿಪಿವೈ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅದಕ್ಕೂ ಮುನ್ನವೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯಂದ್ರ ಅವರಿಗೆ ವಾಟ್ಸ್ಆ್ಯಪ್ ಮೂಲಕ ಸಿ.ಪಿ. ಯೋಗೇಶ್ವರ್ ಅವರು ರಾಜೀನಾಮೆ ಸಂದೇಶ ರವಾನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆಶಿ, ಮಾಜಿ ಸಂಸದ ಡಿ.ಕೆ. ಸುರೇಶ್, ಮದ್ದೂರು ಶಾಸಕ ಉದಯ್ ಗೌಡ, ಸಚಿವ ಜಮೀರ್ ಅಹ್ಮದ್, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಸಚಿವ ಶಿವರಾಜ್ ತಂಗಡಗಿ ಇದ್ದರು. ಡಿಎಸ್ ಚಿಹ್ನೆ ಅಡಿಯಲ್ಲಿ ಸ್ಪರ್ಧೆ ಮಾಡುವಂತೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿದ್ದ ಆಫರ್ ಅನ್ನು ಸಿಪಿವೈ ತಿರಸ್ಕರಿಸಿದ್ದರು. ಬಿಜೆಪಿಯಿಂದ ಕಣಕ್ಕಿಳಿಯುವ ಆಸೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ನಾಯಕರು ಸರಿಯಾಗಿ ಸ್ಪಂದಿಸಲಿಲ್ಲ ಎಂದು ಸ್ವತಃ ಯೋಗಿಶ್ವರ್ ಆರೋಪ ಮಾಡಿದ್ದಾರೆ. ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದರು. ಆದರೆ, ಬಿಜೆಪಿ ನಾಯಕರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಯೋಗೇಶ್ವರ್ ಅವರು ಕೊನೆಗೂ ಕಾಂಗ್ರೆಸ್ ಬಾಗಿಲನ್ನು ಬಡಿದಿದ್ದಾರೆ. ಇಂದು ಸಂಜೆ ಅಥವಾ ನಾಳೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಲಿದೆ.