Connect with us

UDUPI

ಸಮಾಜದಲ್ಲಿ ಶಿಕ್ಷಕರು ಆದರ್ಶ ವ್ಯಕ್ತಿಗಳಾಗಿರಬೇಕು : ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ

ಉಡುಪಿ ಸೆಪ್ಟೆಂಬರ್ 6 : ಡಾ. ಎಸ್.ರಾಧಾಕೃಷ್ಣನ್ ಅವರು ಸೇರಿದಂತೆ ಹಿರಿಯ ಮಹಾನ್ ವ್ಯಕ್ತಿಗಳ ತತ್ವ ಆದರ್ಶಗಳನ್ನು ಪಾಲನೆ ಮಾಡುವುದರೊಂದಿಗೆ ಶಿಕ್ಷಕರು ಉತ್ತಮ ಕಾರ್ಯ ಸಾಧನೆಗಳನ್ನು ಮಾಡಿ, ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಬೆಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು


ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ತಾಲೂಕು ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ , ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ, ಡಾ.ಎಸ್.ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.


ಶಿಕ್ಷಣ ಕ್ಷೇತ್ರದಲ್ಲಿ ಡಾ.ಎಸ್.ರಾದಾಕೃಷ್ಣನ್ , ತಾಂತ್ರಿಕ ಕ್ಷೇತ್ರದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರು ಸೇರಿದಂತೆ ಮತ್ತಿತರ ಮಹಾನ್ ವ್ಯಕ್ತಿಗಳು ಅಂದಿನ ದಿನಗಳಲ್ಲಿ ಆರ್ಥಿಕ ಸಮಸ್ಯೆಗಳು ಜೊತೆಯಲ್ಲಿ ಅನೇಕ ರೀತಿಯ ವಿರೋಧಗಳು ಇದ್ದರೂ ಸಹ ತಾಳ್ಮೆಯಿಂದ ಅವುಗಳನ್ನು ಗೆದ್ದು ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ಯಶಸ್ಸನ್ನು ಸಾದಿಸಿದ್ದು, ಇದು ಎಲ್ಲಾ ಶಿಕ್ಷಕರು ಸ್ಪೂರ್ತಿದಾಯಕ ಎಂದರು.

ಪ್ರಶಸ್ತಿಗಳನ್ನು ಪಡೆಯುವುದು ವ್ಯಕ್ತಿಯ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಇದಕ್ಕೆ ಪೂರಕವಾಗಿ ತಮ್ಮ ಕೆಲಸ ಕಾರ್ಯಗಳನ್ನು ಕೈಗೊಳ್ಳಬೇಕು ಅದರೊಂದಿಗೆ ಜನರ ಪ್ರೀತಿ ವಿಶ್ವಾಸಗಳನ್ನು ಗಳಿಸಿ ಸಮಾಜದಲ್ಲಿ ಮತ್ತಷ್ಟು ಸಾಧನೆಗಳನ್ನು ಮಾಡಬೇಕು ಎಂದರು.
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯ , ಶಿಕ್ಷಕರು ಆದರ್ಶ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಭೋದಿಸುವುದರೊಂದಿಗೆ ಅವರುಗಳನ್ನು ಶಿಕ್ಷಣವಂತರನ್ನಾಗಿಸಿ ಉತ್ತಮ ಪ್ರಜೆಗಳಾಗಿ ರೂಪುಗೊಳಿಸಬೇಕು ಎಂದರು.

Advertisement
Click to comment

You must be logged in to post a comment Login

Leave a Reply