Connect with us

    LATEST NEWS

    ವಿವಾದದ ಬಳಿಕ ತಮ್ಮ ಮತಾಂತರ ಹೇಳಿಕೆ ವಾಪಾಸ್ ಪಡೆದ ಸಂಸದ ತೇಜಸ್ವಿ ಸೂರ್ಯ

    ಉಡುಪಿ ಡಿಸೆಂಬರ್ 27: ಹಿಂದೂ ಧರ್ಮದಿಂದ ಮತಾಂತರಗೊಂಡ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಧರ್ಮದವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಬೇಕು ಅದನ್ನು ಮಠ ದೇವಸ್ಥಾನಗಳಲ್ಲಿ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಇದೀಗ ತಮ್ಮ ಹೇಳಿಕೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.

    ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವಾರ್ಪಣಮ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ ಮುಸ್ಲಿಮರನ್ನ, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ. ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಚೀನಾ, ಜಪಾನಿಗೆ ಮತಾಂತರಗೊಂಡವರನ್ನು ಭಾರತಕ್ಕೆ ತರಬೇಕು. ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಬೇಕು ಎಂದು ಹೇಳಿದರು.


    ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆ ತಮ್ಮ ಹೇಳಿಕೆಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ ಸಂಸದ ತೇಜಸ್ವಿ ಸೂರ್ಯ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುಜ್ಜೀವನ’ ವಿಷಯದ ಕುರಿತು ಮಾತನಾಡಿದ್ದೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಆದ್ದರಿಂದ ನಾನು ಹೇಳಿಕೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply