Connect with us

    LATEST NEWS

    ತೆಲಂಗಾಣ – ರಸ್ತೆ ಅಪಘಾತದಲ್ಲಿ ಬಿಜೆಪಿ ನಾಯಕಿ ನೀರಜಾ ರೆಡ್ಡಿ ಸಾವು

    ತೆಲಂಗಾಣ – ಎಪ್ರಿಲ್ 17: ಕಾರಿನ ಟಯರ್ ಸ್ಪೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಬಿಜೆಪಿ ನಾಯಕಿ ನೀರಜಾ ರೆಡ್ಡಿ ಕೊನೆಯುಸಿರೆಳೆದಿದ್ದಾರೆ. ಕರ್ನೂಲ್‌ನ ಆಲೂರು ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ಅವರು ಹೈದರಾಬಾದ್‌ನಿಂದ ಕರ್ನೂಲ್‌ಗೆ ಹಿಂತಿರುಗುತ್ತಿದ್ದಾಗ ಭಾನುವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತೆಲಂಗಾಣದ ಬೀಚುಪಲ್ಲಿ ಎಂಬಲ್ಲಿ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿತ್ತು.


    ಕೋದಂಡಪುರಂ ಪೊಲೀಸರ ಪ್ರಕಾರ, 52 ವರ್ಷದ ನೀರಜಾ ತೆಲಂಗಾಣಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಕಾರಿನ ಟೈರ್ ಸ್ಫೋಟಗೊಂಡು ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿದೆ. ನೀರಜಾರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply