FILM
ತೆಲುಗು ಸಿನೆಮಾ ರಂಗದ ಖ್ಯಾತ ಹಾಸ್ಯನಟ ಹೃದಯಾಘಾತದಿಂದ ನಿಧನ
ವಿಶಾಖ ಪಟ್ಟಣ ಎಪ್ರಿಲ್ 19: ತೆಲುಗು ಸಿನಿಮಾ ರಂಗದ ಖ್ಯಾತ ಹಾಸ್ಯನಟ ಅಲ್ಲು ರಮೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ವಿಶಾಖಪಟ್ಟಣದಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅವರು ಕುಟುಂಬಸ್ಥರು ತಿಳಿಸಿದ್ದಾರೆ.
ರಂಗಭೂಮಿ, ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಅಭಿನಯಿಸಿದ ಹೆಗ್ಗಳಿಕೆ ಇವರದ್ದು. ನೆಪೋಲಿಯನ್, ರಾವಣ ದೇಶಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ‘ಮಾ ವಿದಾಕುಲು’ ಹೆಸರಿನ ವೆಬ್ ಸರಣಿ ಮೂಲಕ ರಮೇಶ್ ಸಾಕಷ್ಟು ಗುರುತಿಸಿಕೊಂಡಿದ್ದರು. ಅಗಲಿದ ನಟನಿಗೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲು ರಮೇಶ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.
You must be logged in to post a comment Login