LATEST NEWS
‘ಕಾಂತಾರ’ ಕ್ಕೆ ಒಲಿದ ರಾಷ್ಟ್ರಪ್ರಶಸ್ತಿ, ರಿಷಬ್ ಶೆಟ್ಟಿ ತಂಡವನ್ನು ಮನಸಾರೆ ಅಭಿನಂದಿಸಿದ ಅಲ್ಲು ಅರ್ಜುನ್..!

ಹೈದ್ರಾಬಾದ್ : ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದ ‘ಕಾಂತಾರ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದಕ್ಕೆ ಇಡೀ ತಂಡಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ (allu arjun) ಅಭಿನಂದನೆ ತಿಳಿಸಿದ್ದಾರೆ.
ಇತ್ತೀಚೆಗೆ ಹೈದರಾಬಾದ್ನಲ್ಲಿ ‘ಮಾರುತಿ ನಗರ ಸುಬ್ರಹ್ಮಣ್ಯ’ ಚಿತ್ರದ ಪ್ರೀ ರೀಲೀಸ್ ಇವೆಂಟ್ ನಡೆದಿತ್ತು. ರಾವ್ ರಮೇಶ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ‘ಕಾಂತಾರ’ ತಂಡಕ್ಕೆ ಶುಭ ಕೋರಿದರು. ನ್ಯಾಷನಲ್ ಅವಾರ್ಡ್ ಗೆದ್ದ ಎಲ್ಲರಿಗೂ ಅಭಿನಂದನೆಗಳು. ನನಗೆ ಹಿಂದಿನ ವರ್ಷ ರಾಷ್ಟ್ರ ಪ್ರಶಸ್ತಿ ಬಂದಾಗ ಮುಂದಿನ ವರ್ಷ ಕಾಂತಾರ ಚಿತ್ರಕ್ಕೆ ಅವಾರ್ಡ್ ಬಂದರೆ ಚೆನ್ನಾಗಿರುತ್ತಿತ್ತು ಎಂದು ಮನಸಾರೆ ಅಂದುಕೊಂಡಿದ್ದೆ. ಚಿತ್ರದ ನಟ ನಿರ್ದೇಶಕ ರಿಷಬ್ ಶೆಟ್ಟಿಗೂ ಅವಾರ್ಡ್ ಸಿಕ್ಕಿದೆ. ಅವರಿಗೂ ಅಭಿನಂದನೆ’ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲು ಅರ್ಜುನ್ ಅವರು ಕಳೆದ ವರ್ಷ ‘ಪುಷ್ಪ’ ಸಿನಿಮಾ ನಟನೆಗೆ ಅತ್ಯುತ್ತಮ ನಟ ಅವಾರ್ಡ್ ಪಡೆದುಕೊಂಡಿದ್ದರು. ಸದ್ಯ ಅಲ್ಲು ಅರ್ಜುನ್ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ.
