LATEST NEWS
ಅನ್ಲಾಕ್ 3.0 – ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡು
ಮಂಗಳೂರು/ಉಡುಪಿ ಜುಲೈ 05: ರಾಜ್ಯ ಸರಕಾರ ಅನ್ಲಾಕ್ 3.0 ದಲ್ಲಿ ಧಾರ್ಮಿಕ ಕ್ಷೇತ್ರಗಳಲ್ಲಿ ದರ್ಶನಕ್ಕೆ ಅವಕಾಶ ನೀಡಿರುವ ಹಿನ್ನಲೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ಭಕ್ತರ ದಂಡೆ ಆಗಮಿಸುತ್ತಿದೆ.
ಪ್ರಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ನಿರೀಕ್ಷೆಯಂತೆ ಭಕ್ತರು ಶ್ರೀ ಮಂಜುನಾಥ ಸ್ವಾಮಿ ದರ್ಶನಕ್ಕಾಗಿ ಆಗಮಿಸಿದ್ದು, ಕೋವಿಡ್ ನಿಯಮದಂತೆ ಅಂತರ ಕಾಯ್ದುಕೊಂಡು ದೇವರ ದರ್ಶನ ಪಡ಼ೆದಿದ್ದಾರೆ, ಇನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭಕ್ತರು ಆಗಮಿಸಿದ್ದು, ದೇವರ ದರ್ಶನ ಪಡೆದಿದ್ದಾರೆ. ಆದರೆ ದೇವಸ್ಥಾನಗಳಲ್ಲಿ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಯಾವುದೇ ಸೇವೆಗೆ ಅವಕಾಶ ಇಲ್ಲ.
ಉಡುಪಿ ಜಿಲ್ಲೆಯಲ್ಲಿ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬೆಳಗ್ಗೆಯಿಂದ ನೂರಾರು ಭಕ್ತರು ದೇವರ ದರ್ಶನ ಮಾಡುತ್ತಿದ್ದಾರೆ. ಉಡುಪಿ ಶ್ರೀಕೃಷ್ಣಮಠಕ್ಕೆ ವಾರದ ನಂತರ ಪ್ರವೇಶಾವಕಾಶ ಸಾಧ್ಯತೆ ಇದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಭಕ್ತರು ಕೊಲ್ಲೂರಮ್ಮನ ದರ್ಶನ ಪಡೆಯುತಿದ್ದು, ದೇವಸ್ಥಾನದ ಹೊರಗಿನಿಂದಲೇ ಸಾಮಾಜಿಕ ಅಂತರದ ಸರತಿ ಸಾಲಿನಲ್ಲಿ ಭಕ್ತರು ದರ್ಶನಕ್ಕೆ ನಿಂತಿದ್ದಾರೆ.