Connect with us

LATEST NEWS

ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಉಡುಪಿ ಸೆಪ್ಟೆಂಬರ್ 17: ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ.


ಗಂಗೊಳ್ಳಿಯ. ಖಾರ್ವಿಕೇರಿಯ ದಾಕುಹಿತ್ಲು ವಿನ ಯುವಕ ರಾಘವೇಂದ್ರ ಖಾರ್ವಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಆತನನ್ನು ಬಚಾವ್ ಮಾಡಲು ಹೋದ ಜನಾರ್ದನ್ ಖಾರ್ವಿ ಮತ್ತು ಲಕ್ಷ್ಮಣ್ ಖಾರ್ವಿ ಕೂಡಾ ಗಂಭೀರವಾಗಿ ಗಾಯಗೊಂಡು ಉಡುಪಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಾಲಯ ಅಮಾವಾಸ್ಯೆ ಹಿನ್ನಲೆ ಗಂಗೊಳ್ಳಿಯ ಖಾರ್ವಿಕೇರಿಯ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ನಡೆಯುತ್ತಿದ್ದವು, ಈ ಸಂದರ್ಭ ಏಕಾಏಕಿ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ಪೆಟ್ರೋಲ್ ಸುರಿದುಕೊಂಡಿದ್ದಾರೆ. ಈ ವೇಳೆ ಸಮೀಪದಲ್ಲಿದ್ದ ಕಾಲುದೀಪದಲ್ಲಿ ಉರಿಯುತ್ತಿದ್ದ ಬೆಂಕಿ ತಗುಲಿದೆ ಎನ್ನಲಾಗಿದೆ.

ಬೆಂಕಿ ಹೊತ್ತಿ ಉರಿದ ತಕ್ಷಣವೇ ಸ್ಥಳದಲ್ಲಿದ್ದ ಜನಾರ್ದನ್ ಖಾರ್ವಿ ಹಾಗೂ ಲಕ್ಷ್ಮಣ್ ಖಾರ್ವಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದರು. ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದಾಗಿ ಅವರಿಬ್ಬರಿಗೂ ಬೆಂಕಿ ತಗುಲಿದೆ. ಘಟನೆಯಲ್ಲಿ ರಾಘವೇಂದ್ರ ಖಾರ್ವಿ ಹಾಗೂ ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಂಗೊಳ್ಳಿಯ ಆಪತ್ಭಾಂದವ ಆಂಬುಲೆನ್ಸ್ ನ ಇಬ್ರಾಹಿಂ ಹಾಗೂ ತಂಡ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ. ಸದ್ಯ ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Facebook Comments

comments