LATEST NEWS
ಡಿವೈಡರ್ ಗೆ ಡಿಕ್ಕಿ ಹೊಡೆದ ಟೆಂಪೋ – ಚಾಲಕನಿಗೆ ಗಾಯ

ಉಡುಪಿ ಅಕ್ಟೋಬರ್ 9:ಕೊರಿಯರ್ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ನಡೆದಿದೆ.
ಅಪಘಾತದಲ್ಲಿ ಟೆಂಪೊ ಚಾಲಕನ ಕೈ ಮುರಿದಿದ್ದು, ಗಂಭೀರ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಟೆಂಪೋ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.
ಘಟನಾ ಸ್ಥಳಕ್ಕೆ ಕಾಪು ಠಾಣಾ ಪೊಲೀಸರು ತೆರಳಿದ್ದು, ಸಂಚಾರ ಸುಗಮಗೊಳಿಸಿದರು.

Continue Reading