Connect with us

    KARNATAKA

    ಬಹುಮಹಡಿ ಕಟ್ಟಡದಿಂದ ಜಿಗಿದು ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!

    ಬೆಂಗಳೂರು, ಆಗಸ್ಟ್ 30: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಜೆಸ್ಸಿಕಾ (14) ಎಂದು ಗುರುತಿಸಲಾಗಿದೆ.

    ನಿನ್ನೆ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಜೆಸ್ಸಿಕಾ ಬೆಳಗ್ಗೆ ಶಾಲೆಗೆ ಹೋಗಿ ವಾಪಸ್ ಮನೆಗೆ ಬಂದಿದ್ದಾಳೆ. ಬೆಳಗ್ಗೆ 10.30ರ ಸುಮಾರಿಗೆ ಅಪಾರ್ಟ್‌ಮೆಂಟ್‌ಗೆ ಬಂದ ಜೆಸ್ಸಿಕಾ 12ನೇ ಮಹಡಿಯಿಂದ ಜಿಗಿದಿದ್ದಾಳೆ.

    ಜೆಸ್ಸಿಕಾ ತಂದೆ ಸಾಫ್ಟ್‌ವೇರ್ ಎಂಜಿನಿಯರ್, ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಈ ಕುಟುಂಬ ಕ್ಲಾಸಿಕ್‌ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಲ್ಲಿ ವಾಸವಾಗಿದೆ. ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ವಾಪಸ್ ಬಂದಿರೋದು ಪೋಷಕರಿಗೆ ತಿಳಿದಿಲ್ಲ. ಆಕೆ ಆತ್ಮಹತ್ಯೆ ಮಾಡಿಕೊಂಡ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಜೆಸ್ಸಿಕಾ ಕಳೆದ ಮೂರು ತಿಂಗಳಿಂದ ತರಗತಿಗಳಿಗೆ ಹಾಜರಾಗದೆ ಬೇಗ ಮನೆಗೆ ಮರಳುತ್ತಿದ್ದಳು.

    ಈ ವಿಷಯವನ್ನು ಆಕೆಯ ಪೋಷಕರ ಗಮನಕ್ಕೆ ತರಲು ಪ್ರಯತ್ನಿಸಿದ್ದೇವೆ, ಆದರೆ ಅವರ ಫೋನ್ ರೀಚ್ ಆಗಿರಲಿಲ್ಲ. ಅಲ್ಲದೆ, ಆಕೆಯ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಶಾಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply