LATEST NEWS
ಉಗ್ರರ ಬೆದರಿಕೆ ಬೆನ್ನಲ್ಲೇ – ದೇವಸ್ಥಾನಗಳಿಗೆ ಪೊಲೀಸ್ ಭದ್ರತೆ

ಮಂಗಳೂರು ನವೆಂಬರ್ 27: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದ ಬಳಿಕ ಉಗ್ರಗಾಮಿಗಳು ಕರಾವಳಿಯ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ಸಂದೇಶಗಳು ಮಾಧ್ಯಮಗಳು ಹರಿದಾಡುತ್ತಿದ್ದು, ಈ ಹಿನ್ನಲೆ ಪೊಲೀಸ್ ಇಲಾಖೆ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಪೊಲೀಸ್ ಭದ್ರತೆ ಒದಗಿಸಿದೆ.

Kadri temple
ಈ ಮೊದಲು ದೇವಸ್ಥಾನಕ್ಕೆ ಪೊಲೀಸ್ ಭದ್ರತೆಗಾಗಿ ಕದ್ರಿ ಮಂಜುನಾಥ ದೇವಾಲಯ ಆಡಳಿತ ಮಂಡಳಿಯವರು ಮನವಿ ಮಾಡಿದ್ದರು, ಈ ಹಿನ್ನಲೆ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ದೇವಸ್ಥಾನದ ಆಸುಪಾಸಿನಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ದಾಖಲಾಗುವ ದೃಶ್ಯಗಳ ಬಗ್ಗೆಯೂ ವಿಶೇಷ ನಿಗಾ ಇಡಲಾಗುತ್ತಿದೆ. ಸಶಸ್ತ್ರ ಮೀಸಲು ಪಡೆಯ ವಾಹನಗಳೂ ದೇವಸ್ಥಾನದ ಬಳಿ ಬೀಡುಬಿಟ್ಟಿವೆ.
