Connect with us

LATEST NEWS

ದಶಕಗಳ ಬಳಿಕ ಭಯೋತ್ಪಾದಕ ಯಾಸಿನ್ ಭಟ್ಕಳ ವಿಡಿಯೋ ಕಾನ್ಪರೆನ್ಸ್ ಮೂಲಕ ಮಂಗಳೂರು ಕೋರ್ಟ್ ವಿಚಾರಣೆ

ಮಂಗಳೂರು ಜುಲೈ 24: 2008 ರಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಿಸಿ ಉಗ್ರ ಯಾಸಿನ್ ಭಟ್ಕಳ ನನ್ನ 17 ವರ್ಷಗಳ ಬಳಿಕ ವಿಡಿಯೋ ಕಾನ್ಸರೆನ್ಸ್ ಮೂಲಕ ಗುರುವಾರ ನ್ಯಾಯಾಲಯದ ವಿಚಾರಣೆಗೆ ಹಾಜರುಪಡಿಸಲಾಯಿತು. ಮುಂದಿನ ವಿಚಾರಣೆಯನ್ನು ಆಗಸ್ಟ್ 08 ರಂದು ನಿಗದಿಪಡಿಸಲಾಗಿದೆ.


ದೇಶದ ವಿವಿಧ ಕಡೆಗಳಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಪೂರ್ವ ತಯಾರಿ ಆರೋಪದ ಮೇರೆಗೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆ ಎಂಬಲ್ಲಿ ಅಪರಾಧಿಕ ಒಳ ಸಂಚನ್ನು ನಡೆಸಿ ಸ್ಪೋಟಕ ವಸ್ತುಗಳನ್ನು ಹಾಗೂ ಸ್ಪೋಟಕಗಳನ್ನು ತಯಾರಿಸುವ ವಸ್ತುಗಳನ್ನು ತಮ್ಮ ಬಳಿ ಇಟ್ಟುಕೊಂಡು ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ನಿಷೇದಿತ ಇಂಡಿಯನ್ ಮುಜಾಹೀದ್ದೀನ್ ಸಂಘಟನೆಗೆ ಸೇರಿದ ಆರೋಪಿಗಳನ್ನು ದಿನಾಂಕ 04-10-2008 ರಂದು ಹಿಂದಿನ ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಐಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೊ.ನಂ. 242/2008 ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ನಿಷೇಧಿತ ಇಂಡಿಯನ್ ಮುಜಾಹೀದ್ದೀನ್ ಸಂಘಟನೆಯ ಸದಸ್ಯರಾದ 7 ಜನ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು, 6 ಜನ ಆರೋಪಿಗಳು ತಲೆಮರೆಸಿಕೊಂಡಿರುತ್ತಾರೆ.

ಈ ಪ್ರಕರಣದಲ್ಲಿ ಆರೋಪಿಗಳ ಮೇಲೆ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದ್ದು, ಪ್ರಕರಣವು ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಗಳಾದ 1) ಸಯ್ಯದ್ ಮೊಹಮ್ಮದ್ ನೌಶಾದ್, 2) ಅಹಮ್ಮದ್ ಬಾವ ಅಬೂಬಕ್ಕರ್ 33 ವರ್ಷ, ಮತ್ತು 3) ಫಕೀರ್ ಅಹಮ್ಮದ್ @ ಫಕೀರ್, ಎಂಬವರಿಗೆ ಈಗಾಗಲೇ ಜೀವಾವಧಿ ಶಿಕ್ಷೆ ವಿಧಿಸಿ ಹಾಗೂ ಆರೋಪಿಗಳಾದ 1) ಮೊಹಮ್ಮದ್ ಆಲಿ, 2) ಜಾವೇದ್ ಆಲಿ, 3) ಮೊಹಮ್ಮದ್ ರಫೀಕ್ ಮತ್ತು 4) ಶಬ್ಬೀರ್ ಭಟ್ಕಳ್ ಎಂಬವರನ್ನು ಖುಲಾಸೆಗೊಳಿಸಿ ದಿನಾಂಕ: 12-04-2017 ರಂದು ರಂದು ಅಂತಿಮ ತೀರ್ಪು ಹೊರಡಿಸಿರುತ್ತದೆ. ಆದರೆ ಸದ್ರಿ ಪ್ರಕರಣದ ನ್ಯಾಯಾಲಯದ ವಿಚಾರಣಾ ಕಾಲದಲ್ಲಿ ಯಾಸೀನ್ ಭಟ್ಕಳ ತಲೆಮರೆಸಿಕೊಂಡಿದ್ದ ಕಾರಣ ವಿಚಾರಣೆಯು ಬಾಕಿ ಇತ್ತು.

ಈ ಪ್ರಕರಣದಲ್ಲಿ ಆರೋಪಿ ಯಾಸೀನ್ ಭಟ್ಕಳ @ ಶಾರೂಕ್ @ ಡಾಕ್ಟರ್ ಅರಾಜೂ @ ಯೂಸಫ್ @ ಇಮ್ರಾನ್ @ ಯಾಸೀರ್ ಅಹಮ್ಮದ್, ವಾಸ: ಮಗದುಮ ಕಾಲನಿ ಭಟ್ಕಳ ಉತ್ತರ ಕನ್ನಡ ಜಿಲ್ಲೆ ಎಂಬಾತನು ಹೈದರಾಬಾದ್ ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ದೆಹಲಿ ರಾಜ್ಯದ ತಿಹಾರ್ ಕೇಂದ್ರ ಕಾರಾಗೃಹದಲ್ಲಿ ಶಿಕ್ಷಾ ಖೈದಿಯಾಗಿ ಬಂಧನದಲ್ಲಿ ಇದ್ದವನನ್ನು ಹಲವಾರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರುಪಡಿಸದೇ ಇರುವುದರಿಂದ ಈತನ ಮೇಲಿನ ಪ್ರಕರಣವು ಮಾನ್ಯ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದು, ಈತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವ ಕುರಿತಾಗಿ ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ಸೂಕ್ತ ಪ್ರಕ್ರಿಯೆಯನ್ನು ಕೈಗೊಂಡು ದೆಹಲಿ ತಿಹಾರ್ ಕೇಂದ್ರ ಕಾರಾಗೃಹದಲ್ಲಿದ್ದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಆರೋಪಿ ಯಾಸೀನ್ ಭಟ್ಕಲ್ ಎಂಬಾತನನ್ನು ವಿಡಿಯೋ ಕಾನ್ಪರೆನ್ಸ್ ಮುಖಾಂತರ ಈ ದಿನ ದಿನಾಂಕ:24-07-2025 ರಂದು ಮಾನ್ಯ ನ್ಯಾಯಾಲಯದ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಹಾಜರುಪಡಿಸಿದ್ದು, ಮುಂದಿನ ವಿಚಾರಣೆಯನ್ನು ದಿನಾಂಕ 20-08-2025 ರಂದು ನಿಗಧಿಪಡಿಸಿರುತ್ತಾರೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *