ಚಿಕ್ಕಬಳ್ಳಾಪುರ, ಮಾರ್ಚ್ 17:ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಚದಲಪುರ ಸರ್ಕಲ್ ಸಮೀಪ ಎರಡು ಮಹೀಂದ್ರಾ ಥಾರ್ ಕಾರುಗಳು ಪರಸ್ಪರ ಡಿಕ್ಕಿಯಾಗಿವೆ.

ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನ ಚಕ್ರ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಎರಡೂ ವಾಹನಗಳು ರಸ್ತೆ ಬದಿಯ ಜಮೀನಿಗೆ ನುಗ್ಗಿವೆ.
ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.