KARNATAKA
ರಾಜ್ಯದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶ
ಬೆಂಗಳೂರು ಎಪ್ರಿಲ್ 11 : ಪತಂಜಲಿ ಉತ್ಪನ್ನಗಳ ವಿರುದ್ದ ಸುಪ್ರಿಂಕೋರ್ಟ್ ಗರಂ ಆದ ಬೆನ್ನಲ್ಲೇ ಇದೀಗ ರಾಜ್ಯ ಸರಕಾರ ಎಚ್ಚೆತ್ತುಕೊಂಡಿದ್ದು, ರಾಜ್ಯದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆದೇಶಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಔಷದ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯವನ್ನು ಯಾವುದೇ ಕಾರಣಕ್ಕೂ ಲಘುವಾಗಿ ತೆಗೆದುಕೊಳ್ಳುವಂತಿಲ್ಲ ಎಂದಿದೆ. ಇದಾದ ಬಳಿಕ ದಿನೇಶ್ ಗುಂಡೂರಾವ್ ಈ ಕ್ರಮ ಕೈಗೊಂಡಿದ್ದಾರೆ.