LATEST NEWS
ಅಡ್ಯಾರ್ ಬಳಿ ಕಾರಿನ ಮೇಲೆ ಬಸ್ ಪಲ್ಟಿ 16 ಮಂದಿಗೆ ಗಾಯ

ಅಡ್ಯಾರ್ ಬಳಿ ಕಾರಿನ ಮೇಲೆ ಬಸ್ ಪಲ್ಟಿ 16 ಮಂದಿಗೆ ಗಾಯ
ಮಂಗಳೂರು ಅಗಸ್ಟ್ 1: ಅಡ್ಯಾರ್ – ಅರ್ಕುಳ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರಿನ ಮೇಲೆ ಖಾಸಗಿ ಬಸ್ ಪಲ್ಟಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರ ಸಹಿತ 16 ಮಂದಿ ಗಾಯಗೊಂಡ ಘಟನೆ ನಡೆದಿದೆ.
ವಿಟ್ಲದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನ ಟಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ಕಳೆದುಕೊಂಡ ಬಸ್ ಇನ್ನೊಂದು ಬದಿಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಅದರ ಮೇಲೆ ಪಲ್ಟಿಯಾಗಿದೆ.

ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ 13 ಮಂದಿಗೆ ಗಾಯವಾಗಿದೆ. ಅಪಘಾತದಿಂದ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದ್ದು, ಬಸ್ ಕೂಡಾ ಜಖಂಗೊಂಡಿದೆ.