Connect with us

    LATEST NEWS

    ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಗುಂಡಿ ತಪ್ಪಿಸಲು ಹೋಗಿ ಪ್ರಾಣ ತೆತ್ತ ಇಬ್ಬರು ಚಾಲಕರು

    ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಗುಂಡಿ ತಪ್ಪಿಸಲು ಹೋಗಿ ಪ್ರಾಣ ತೆತ್ತ ಇಬ್ಬರು ಚಾಲಕರು

    ಉಡುಪಿ ಜುಲೈ 14: ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆಯಲ್ಲಿರುವ ಗುಂಡಿಯನ್ನು ತಪ್ಪಿಸಲು ಹೋಗಿ ಇಬ್ಬರು ಚಾಲಕರು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

    ಉಡುಪಿಯ ಸಂತೆಕಟ್ಟೆಯಲ್ಲಿ ನಡೆದ ಕಾರು ಮತ್ತು ಟೆಂಪೋ ಅಪಘಾತದಲ್ಲಿ ಟೆಂಪೋ ಚಾಲಕ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಅನೂಪ್ ಗಂಭೀರ ಗಾಯಕ್ಕೆ ಒಳಗಾಗಿದ್ದು ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    ರಾಷ್ಟ್ರೀಯ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಕಾರು ಡಿವೈಡರ್ ದಾಟಿ, ಉಡುಪಿಯಿಂದ ಕುಂದಾಪುರ ಕಡೆ ಬರುತ್ತಿದ್ದ ಟೆಂಪೋ ಮೇಲೆ ಬಿದ್ದಿದೆ. ಪರಿಣಾಮ ಟೆಂಪೋ ಚಾಲಕ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟೆಂಪೋದಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಈ ಸಂಬಂಧ ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಕೆಲಕಾಲ ಸ್ಥಗಿತವಾಗಿತ್ತು.

    Share Information
    Advertisement
    Click to comment

    Leave a Reply

    Your email address will not be published. Required fields are marked *