DAKSHINA KANNADA
ಉದ್ಯಮಿ ಮುಮ್ತಾಝ್ ಅಲಿ ನಿಗೂಢ ಸಾವಿನ ಪ್ರಕರಣ, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದಿಷ್ಟು..!!
ಮಂಗಳೂರು : ಉದ್ಯಮಿ ಹಾಗೂ ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಪ್ರಕರಣದಲ್ಲಿ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಆರು ಜನರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ತನಿಖೆ ತೀವ್ರಗತಿಯಲ್ಲಿ ಮುಂದುವರೆದಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಮ್ತಾಝ್ ಅಲಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರ ಕುಟುಂಬಸ್ಥರು ಕಾವೂರು ಠಾಣೆಗೆ ಬ್ಲಾಕ್ ಮೇಲ್ ಬಗ್ಗೆ ದೂರು ನೀಡಿದ್ದರು. ಹನಿಟ್ರ್ಯಾಪ್ ರೀತಿಯಲ್ಲಿ ಆರು ಜನರ ಮೇಲೆ ಅವರು ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಹೇಳಿದರು.
ಮುಮ್ತಾಝ್ ಅಲಿಯವರು 50 ಲಕ್ಷ ಹಣ ಕೊಟ್ಟಿದ್ದರು, ಹಾಗೆಯೇ 25 ಲಕ್ಷ ಚೆಕ್ ಮೂಲಕ ನೀಡಿದ್ದರು. ವಾಯ್ಸ್ ಕ್ಲಿಪ್ಪಿಂಗ್ ನಲ್ಲಿ ಮುಮ್ತಾಝ್ ಅಲಿ, ಕೆಲವರ ಹೆಸರು ಉಲ್ಲೇಖ ಮಾಡಿದ್ದಾರೆ. ಮಹಿಳೆ ಜೊತೆಗಿನ ಸೆಕ್ಸ್ ವಿಡಿಯೋ ಅಂತ ಹೇಳಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಈ ಬಗ್ಗೆ ಅವರು ಸಾಯುವ ಮುನ್ನ ಫ್ಯಾಮಿಲಿ ಗ್ರೂಪ್ ನಲ್ಲಿ ವಾಯ್ಸ್ ನೋಟ್ ಕೂಡ ಹಾಕಿದ್ದರು. ಆರೋಪಿ ಸತ್ತಾರ್ ಹೆಸರು ಕೂಡ ವಾಯ್ಸ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ. ಎ1 ಆರೋಪಿ ಮಹಿಳೆ ರೆಹಮತ್ ಸಂಬಂಧಿ ಅಲ್ಲ ಈ ಬಗ್ಗೆ ತನಿಖೆ ನಡೆಯುತ್ತಿದೆ. ಅವರ ಕಾರು ಎಂಸಿಎಫ್ ರೈಲ್ವೆ ಗೇಟ್ ಬಳಿ ಅವರು ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿದ್ದು ಬಳಿಕ ಸೇತುವೆ ಬಳಿಗೆ ಬಂದು ನದಿಗೆ ಹಾರಿದ್ದಾರೆ ಎಂದು ಹೇಳಿದರು.