Connect with us

    KARNATAKA

    ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು

    ಹಾಸನ, ಸೆಪ್ಟೆಂಬರ್  07: ಜೋಕಾಲಿ ಆಟವಾಡುವ ಸಂದರ್ಭ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

    ಮನೋಜ್ (8), ಮೃತಪಟ್ಟ ಬಾಲಕನಾಗಿದ್ದು, ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಈತ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ.

    ಮಗುವಿನ  ಪೋಷಕರು ಕೃಷಿ ಕಾರ್ಯಕ್ಕೆಂದು ಮಗುವನ್ನು ಮನೆಯಲ್ಲಿ ಬಿಟ್ಟು ತೆರಳಿದ್ದರು. ಈ ವೇಳೆ ಮನೆಯಲ್ಲಿ ಕಟ್ಟಿದ ಜೋಕಾಲಿಯಲ್ಲಿ ಮಗು ಆಟವಾಡುವ ಸಂದರ್ಭದಲ್ಲಿ, ಕುತ್ತಿಗೆಗೆ ಹಗ್ಗ ಸಿಲುಕಿಕೊಂಕೊಂಡಿದೆ. ಮನೋಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಾಣವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply