Connect with us

    DAKSHINA KANNADA

    ಮಹಿಳಾ ಪ್ರಾಧ್ಯಾಪಕಿಯ ಮಾನಹಾನಿ ಪ್ರಕರಣ- ಇಬ್ಬರು ಪ್ರಾಧ್ಯಾಪಕರು ಸೇರಿ ಮೂವರ ಬಂಧನ

    ಮಂಗಳೂರು, ಎಪ್ರಿಲ್ 20: ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಎಸ್‌ವಿಎಸ್‌ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

    ಈ ಪ್ರಕರಣದಲ್ಲಿ ಒಟ್ಟು 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಧಿತರನ್ನು ಪ್ರಕಾಶ್ ಶೆಣೈ (44), ಪ್ರದೀಪ್ ಪೂಜಾರಿ (36), ತಾರಾನಾಥ ಬಿ ಎಸ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಎಸ್‌ವಿಎಸ್‌ ಕಾಲೇಜ್ ವೊಂದರ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ನಡುವಿನ ಪ್ರಾಧ್ಯಾಪಕರ ನೇಮಕಾತಿ ಹಾಗೂ ಆಡಳಿತ ವಿಚಾರದ ಗಲಾಟೆಯಲ್ಲಿ ಕಾಲೇಜಿನ ಮಹಿಳಾ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಪತ್ರವನ್ನು,

    ಪೋಸ್ಟರ್ ಗಳನ್ನು ತಯಾರಿಸಿ ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಪ್ರಾಂಶುಪಾಲರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿ ಮಾನಹಾನಿ, ಜೀವ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳಾ ಪ್ರಾಧ್ಯಾಪಕಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಮಹಿಳಾ ಪ್ರಾಧ್ಯಾಪಕಿಯ ಮೊಬೈಲ್ ನಂಬ್ರ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಗಳನ್ನು ತಯಾರಿಸಿ ಸುಳ್ಯ, ಸುಬ್ರಹ್ಮಣ್ಯ, ಸಂಪಾಜೆ, ಮಡಿಕೇರಿ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಬಾಳೆಹೊನ್ನೂರು, ಎನ್ ಆರ್ ಪುರ, ಶಿವಮೊಗ್ಗ ಮುಂತಾದ ಬಸ್ ಸ್ಟಾಂಡ್ ಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಅಂಟಿಸಿದ್ದು,

    ಇದನ್ನು ನೋಡಿದ ಸಾರ್ವಜನಿಕರು ಮಹಿಳಾ ಪ್ರಾದ್ಯಾಪಕಿಗೆ ಕರೆ ಮಾಡಿ ಅಶ್ಲೀಲವಾಗಿ ಮಾನಹಾನಿಕರವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಆರೋಪಿಗಳ ಪೈಕಿ ಪ್ರದೀಪ್ ಪೂಜಾರಿ ಎಂಬವರ ವಿರುದ್ಧ ಈ ಹಿಂದೆ 2019 ನೇ ಇಸವಿಯಲ್ಲಿ ಕಾಲೇಜ್ ಪ್ರಾಧ್ಯಾಪಕಿಯೊಬ್ಬರಿಗೆ ಮಾನಹಾನಿಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ.

    ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರುಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ 3 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply