Connect with us

    DAKSHINA KANNADA

    ಸೆ.15ರವರೆಗೆ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನಗಳನ್ನು ನಿಷೇಧಿಸಿದ ಜಿಲ್ಲಾಡಳಿತ..!!

    ಶಿವಮೊಗ್ಗ : ಮಲೆನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣನ ಆರ್ಭಟದ ಮಧ್ಯೆಯೂ ಪ್ರವಾಸಿಗರ ಸಂಖ್ಯೆ, ವಾಹನಗಳ ಓಡಾಟ ಜಾಸ್ತಿಯಾಗಿದೆ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ (Agumbe Ghat) ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ (Shivamogga) ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ಜೂನ್‌ 27ರಿಂದ ಸೆಪ್ಟೆಂಬರ್‌ 15ರವರೆಗೆ ಆಗುಂಬೆ ಘಾಟಿ ರಸ್ತೆಗಳಲ್ಲಿ ಭಾರಿ ಗಾತ್ರದ ವಾಹನಗಳ (Heavy Vehicles) ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗಗಳನ್ನೂ ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸೇರಿದಂತೆ ಯಾವುದೇ ಪ್ರದೇಶಗಳ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹಾಗಾಗಿ, ತೀರ್ಥಹಳ್ಳಿ- ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ತೀರ್ಥಹಳ್ಳಿ–ಮಾಸ್ತಿಕಟ್ಟೆ– ಸಿದ್ದಾಪುರ– ಕುಂದಾಪುರ- ಉಡುಪಿ ಮಾರ್ಗವಾಗಿ ಭಾರಿ ವಾಹನಗಳು ಸಂಚರಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply