Connect with us

    LATEST NEWS

    ಏರುತ್ತಲಿರುವ ಜಲಪ್ರಳಯ, ಶೃಂಗೇರಿ ಶಾರದಾ ದೇಗುಲ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಗೊಳಿಸಿದ ಜಿಲ್ಲಾಡಳಿತ..!

    ಏಕಾಏಕಿ ತುಂಗಾ ನದಿ ಒಳ ಹರಿವಿನಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ತುಂಗಾ ನದಿಯಿಂದ ನೆರೆ ಆತಂಕ ಭೀತಿ ಶುರುವಾಗಿದ್ದರಿಂದ ಪುರಾಣ ಪ್ರಸಿದ್ದ ಯಾತ್ರಾ ಸ್ಥಳ ಶೃಂಗೇರಿ ದೇವಳದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

    ಚಿಕ್ಕಮಗಳೂರು : ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಮಳೆ ವೇಗ ಕೊಂಚ ಕಡಿಮೆಯಾಗಿದ್ದರೂ ಭೂ ಕುಸಿತ , ನೆರೆ ಹಾವಳಿ ಇನ್ನೂ ನಿಂತಿಲ್ಲ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸುರಿದ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದೆ ಜಿಲ್ಲೆಯ ಶೃಂಗೇರಿ ಭಾಗದಲ್ಲೂ ಭಾರೀ ಗುಡ್ಡ ಕುಸಿತವಾಗಿದೆ.

     

    ಪುರಾಣ ಪ್ರಸಿದ್ದ ಶೃಂಗೇರಿ ಶಾರದಾ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆರೆ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲ;ಇ ಮುಂಜಾಗೃತಾ ಕ್ರಮವಾಗಿ ಅಂದರೆ ಶೃಂಗೇರಿ ದೇವಾಲಯದ ಸುತ್ತಮುತ್ತದ ಗಾಂಧಿ ಮೈದಾನ, ಪ್ಯಾರಲ್ ‌ರೋಡ್, ಪಾರ್ಕಿಂಗ್ ಸ್ಥಳ ಸೇರಿದಂತೆ ನದಿ ತೀರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶೃಂಗೇರಿ ದೇವಾಲಯ ಸುತ್ತಮುತ್ತಲಿನ ಪ್ರದೇಶ ಎರಡು ಭಾರಿ ಮುಳುಗಡೆಯಾಗಿತ್ತು. ಇದೀಗ ಮತ್ತೆ ಮಳೆ ಹೆಚ್ಚಾದಂತೆ ಏಕಾಏಕಿ ತುಂಗಾ ನದಿ ಒಳ ಹರಿವಿನಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ತುಂಗಾ ನದಿಯಿಂದ ನೆರೆ ಆತಂಕ ಭೀತಿ ಶುರುವಾಗಿದ್ದರಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸ್ಥಳೀಯರು ,ಪ್ರವಾಸಿಗರು ಸೇರಿದಂತೆ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಅಲ್ಲದೇ ಗಾಂಧಿ ಮೈದಾನದಲ್ಲಿದ್ದ ಅಂಗಡಿ ಮುಂಗಟ್ಟುಗಳನ್ನ ತೆರೆಯದಂತೆ ಸೂಚನೆ ನೀಡಲಾಗದೆ. ಅಲ್ಲದೇ ವಾಹನಗಳ ಪಾರ್ಕಿಂಗ್ ಮಾಡದಂತೆ ನಿರ್ಬಂಧ ಹೇರಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.


    ಇನ್ನೊಂದೆಡೆ ಶೃಂಗೇರಿ ಪಟ್ಟಣದ ಹೃದಯ ಭಾಗದಲ್ಲಿರುವ ಗೋರಿ ಗುಡ್ಡ ಕುಸಿತವಾಗಿದೆ. ಗುಡ್ಡದ ಮೇಲಿರುವ ಹಜರತ್ ಮೆಹಬೂಬ್ ಝಹೂರ್ ಷಾಹ ದರ್ಗಾ ಕೇಳ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಈ ಹಿನ್ನೆಲೆಯಲ್ಲಿ ಇದೀಗ ದರ್ಗಾ ಕುಸಿದು ಮನೆಗಳ ಮೇಲೆ ಬಿಳುವ ಆತಂಕ ಸೃಷ್ಟಿಯಾಗಿದೆ. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿತವಾಗುತ್ತಿದೆ. ಒಂದು ವೇಳೆ ಹಂತ ಹಂತವಾಗಿ ಮಣ್ಣು ಕುಸಿದರೆ ದರ್ಗಾ, ಹತ್ತಾರು ಮನೆಗಳ ಮೇಲೆ ಬಿಳಲಿದೆ. ಸದ್ಯ ಸ್ಥಳೀಯರು ಮಣ್ಣು ಕುಸಿದ ಸ್ಥಳದಲ್ಲಿ ಪ್ಲಾಸ್ಟಿಕ್ ಟಾರ್ಪಲ್ ಹಾಕಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply