LATEST NEWS
ಕಾರ್ಕಳ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು
ಕಾರ್ಕಳ ಜನವರಿ 17: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಜಾರಿಗೆ ಕಟ್ಟೆ ಚರ್ಚಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಕಾರಿನಲ್ಲಿ ಮೂವರಿಗೆ ಗಾಯಗಳಾಗಿದ್ದು, ಅದರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಕಾರು ಶಿವಮೊಗ್ಗದಿಂದ ಮಂಗಳೂರು ಕಡೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಡೆಗೋಡೆಗೆ ಅಪ್ಪಳಿಸಿ ಪಲ್ಟಿಯಾಗಿದೆ. ಅಪಘಾತ ಗಮನಿಸಿದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಹೋಗುತ್ತಿದ್ದ ಯಾತ್ರೆಗಳು ಸಮಾಜ ಸೇವಕ ಸುಪ್ರೀತ್ ಶೆಟ್ಟಿಯವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಆಗಮಿಸಿದ ಅವರು ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.