KARNATAKA
5 ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಕೊಠಡಿಯಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಶಿಕ್ಷಕ..!
ಕಲಬುರ್ಗಿ : ಸರ್ಕಾರಿ ಶಾಲೆಯೊಂದರಲ್ಲಿ 5ನೇ ತರಗತಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಕಾಮುಕ ಶಿಕ್ಷಕನ ವಿರುದ್ದ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಧ್ಯಾಹ್ನ ಬಿಸಿಯೂಟ ಮಾಡಿದ ಬಳಿಕ ಬಾಲಕಿ ಶಾಲಾ ಕೋಣೆಗೆ ತೆರಳಿದ್ದಳು. ಶಾಲಾ ಕೋಣೆಯ ಬಾಗಿಲು ಹಾಕಿ ಒಳಗೆ ಬಂದ ಶಿಕ್ಷಕ ಮಲ್ಲಿಕಾರ್ಜುನ, ಬಾಲಕಿಯಿಂದ ಕಿಟಕಿಗಳನ್ನು ಮುಚ್ಚಿಸಿ ಆ ಬಳಿಕ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಡುತ್ತಿದ್ದಂತೆ ಅಲ್ಲಿಂದ ಓಡಿ ಹೋದ ಎಂದು ಪೊಲೀಸರು ತಿಳಿಸಿದ್ದಾರೆ. ಗಾಬರಿಗೊಂಡ ವಿದ್ಯಾರ್ಥಿನಿ ತನ್ನ ತಂಗಿಯೊಂದಿಗೆ ಮನೆಗೆ ಹೋಗಿ, ಪೋಷಕರಿಗೆ ನಡೆದ ಘಟನೆಯನ್ನು ತಿಳಿಸಿದ್ದಳು. ಪೋಷಕರು ಮುಖ್ಯಶಿಕ್ಷಕರ ಗಮನಕ್ಕೆ ತಂದ ಬಳಿಕ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ..
ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
You must be logged in to post a comment Login