KARNATAKA
ಆರ್‌ಟಿಐ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಹಾಕಿದ್ರೆ ಅವರ ಪಟ್ಟಿ ಕೊಡುವಂತೆ ಮಾಡಿದ ಆದೇಶ ಹಿಂಪಡೆದ ಸರ್ಕಾರ..!
ಮಾಹಿತಿ ಹಕ್ಕು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಹಾಕಿದ್ರೆ ಅವರ ಪಟ್ಟಿಯನ್ನು ಕೊಡುವಂತೆ ಮಾಡಿದ ಆದೇಶವನ್ನು ಸರ್ಕಾರ ಹಿಂಪಡೆದಿದೆ.
ಬೆಂಗಳೂರು : ಮಾಹಿತಿ ಹಕ್ಕು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಹಾಕಿದ್ರೆ ಅವರ ಪಟ್ಟಿಯನ್ನು ಕೊಡುವಂತೆ ಮಾಡಿದ ಆದೇಶವನ್ನು ಸರ್ಕಾರ ಹಿಂಪಡೆದಿದೆ.
ಸಾಮಾಜಿಕ ಹೋರಾಟಗಾರರು ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರ ನಿಯೋಗ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರನ್ನು ಭೇಟಿಯಾಗಿ ಆಯುಕ್ತರಾದ ಗುರುನಾಥ ಡಾಕಪ್ಪ ರವರು ಮಾಡಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಲಾಯಿತು.
ಜೊತೆಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ( ಆಡಳಿತ ಸುಧಾರಣೆ, ತರಬೇತಿ ಮತ್ತು ಮಾಹಿತಿ ಹಕ್ಕು) ಮನೀಶ್ ಮೌದಿಗಲ್ ಅವರನ್ನು ಭೇಟಿಯಾಗಿ ಮಾಹಿತಿ ಹಕ್ಕು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಹಾಕಿದ್ರೆ ಅವರ ಪಟ್ಟಿಯನ್ನು ಕೊಡುವಂತೆ ಮಾಡಿದ ಆದೇಶವನ್ನು ಹಿಂಪಡೆಯಬೇಕೆಂದು ನೈಜ ಹೋರಾಟಗಾರರ ವೇದಿಕೆಯ ಕಾರ್ಯಕರ್ತರ ಮನವಿಗೆ ಸ್ಪಂದಿಸಿದ ಡಿಪಿಆರ್ ಪ್ರಧಾನ ಕಾರ್ಯದರ್ಶಿ ಅವರು ತಕ್ಷಣದಿಂದ ಜಾರಿ ಆಗುವಂತೆ ಆದೇಶವನ್ನು ಹಿಂಪಡೆದಿರುತ್ತಾರೆ.
ಇದು ನೈಜ್ಯ ಹೋರಾಟಗಾರರಿಗೆ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರ ಹೋರಾಟಕ್ಕೆ ಜಯ ಲಭಿಸಿದೆ ಎಂದು ಹಿರಿಯ ಸಾಮಾಜಿಕ ಹೋರಾಟಗಾರರು ನೈಜ್ಯ ಹೋರಾಟಗಾರರ ವೇದಿಕೆಯ ಹೆಚ್ಎಂ ವೆಂಕಟೇಶ್ ಪ್ರತಿಕ್ರಿಯಿಸಿದ್ದಾರೆ.