LATEST NEWS
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮೀ ವಿರುದ್ದ ಎಫ್‌ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮೀ ವಿರುದ್ದ ಎಫ್‌ಐಆರ್ ದಾಖಲಿಸಲು ಹೈಕೋರ್ಟ್ ಆದೇಶ
ನವದೆಹಲಿ, ಫೆಬ್ರವರಿ 10: ಫೆಬ್ರವರಿ ಹಿರಿಯ ಪತ್ರಕರ್ತ ಹಾಗೂ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ.
ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವರಾದ ಶಶಿ ತರೂರ್ ಅರ್ನಬ್ ವಿರುದ್ಧ ದೂರು ದಾಖಲಿಸಿದ್ದರು. ತನ್ನ ಪತ್ನಿ ಸುನಂದಾ ಪುಷ್ಕರ್ ಸಾವಿಗೆ ಸಂಬಂಧಿಸಿದ ತನಿಖಾ ವರದಿಗಳು ಹಾಗೂ ಪೊಲೀಸರ ಆಂತರಿಕ ಟಿಪ್ಪಣಿಗಳನ್ನು ಒಳಗೊಂಡ ರಹಸ್ಯ ದಾಖಲೆಗಳನ್ನು ಅರ್ನಬ್ ಬಳಸಿಕೊಂಡಿದ್ದರು. ತನಿಖೆ ನಡೆಯುತ್ತಿರುವ ಪ್ರಕರಣದ ತನಿಖಾ ಮಾಹಿತಿಯನ್ನು ಸಾರ್ವಜನಿಕರಿಗೆ ಅಥವಾ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ಅವಕಾಶವಿಲ್ಲ ಎಂದು ಶಶಿ ತರೂರ್ ದೂರಿನಲ್ಲಿ ಪ್ರಸ್ತಾಪಿಸಿದ್ದರು. ಅರ್ನಬ್ ಒಡೆತನದ ಸುದ್ದಿ ವಾಹಿನಿ ಟಿಆರ್ ಪಿ ಗೋಸ್ಕರ ವೀಕ್ಷಕರ ಸಂಖ್ಯೆ ಹೆಚ್ಚಿಸಿಕೊಳ್ಳಲು ಉದ್ದೇಶ ಪೂರ್ವಕವಾಗಿಯೇ ಮಾನಹಾನಿಯಾಗುವಂತಹ ಸುದ್ದಿ ಪ್ರಕಟಿಸಿದ್ದಾರೆ ಎಂದು ಶಶಿ ತರೂರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ತನ್ನ ಖಾಸಾಗಿ ತನಕ್ಕೂ ಧಕ್ಕೆ ತಂದಿದ್ದಾರೆ ಆದ್ದರಿಂದ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದರು. ದೆಹಲಿ ಕೋರ್ಟ್ ಪ್ರಕರಣದ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಸಂಬಂಧಿತ ಪೊಲೀಸ್ ಠಾಣಾಧಿಕಾರಿಗಳಿಗೆ ಆದೇಶಿಸಿದ್ದಾರೆ. ತನಿಖೆಗೆ ಸಂಬಂಧಿಸಿದ ರಹಸ್ಯ ದಾಖಲೆಗಳು ಹೊರ ಬಂದಿದ್ದರ ಬಗ್ಗೆಯೂ ತನಿಖೆ ಕೈಗೊಳ್ಳುವಂತೆ ಕೋರ್ಟ್ ಸೂಚಿಸಿದೆ. 2014ರ ಜನವರಿಯಲ್ಲಿ ತರೂರ್ ಪತ್ನಿ ಸುನಂದಾ ಪುಷ್ಕರ್ ನವದೆಹಲಿಯ ಹೋಟೆಲ್‌ವೊಂದರಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟಿದ್ದರು. ಪ್ರೇರೇಪಿತ ಆತ್ಮಹತ್ಯೆ ಎಂಬ ಆರೋಪದ ಮೇಲೆ ತರೂರ್ ವಿರುದ್ಧ ಪೊಲೀಸರು ಆರೋಪ ಮಾಡಿದ್ದರು. ತನ್ನ ಮೇಲಿನ ಆರೋಪಗಳು ಅಸಂಬದ್ಧ ಹಾಗೂ ಆಧಾರ ರಹಿತ ಎಂದು ತರೂರ್ ಪ್ರತಿಕ್ರಿಯಿಸಿದ್ದರು. ಈ ಪ್ರಕರಣವನ್ನು ದೆಹಲಿ ಕೋರ್ಟ್ ಫೆ.4ರಂದು ಸೆಷನ್ಸ್ ಕೋರ್ಟ್‌ಗೆ ವರ್ಗಾಯಿಸಿತ್ತು.
