FILM
ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಸೃಷ್ಟಿಸಿದ “ದಿ ಕೇರಳ ಸ್ಟೋರಿ” ಚಿತ್ರದ ಟ್ರೇಲರ್
ಮುಂಬೈ ಎಪ್ರಿಲ್ 27: ಚಿತ್ರದ ಟೀಸರ್ ಬಿಡುಗಡೆ ವೇಳೆ ಭಾರೀ ವಿವಾದ ಸೃಷ್ಠಿಸಿದ ದಿ ಕೇರಳ ಸ್ಟೋರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ನಲ್ಲಿದೆ. ಕೇರಳದಲ್ಲಿ ನಡೆದ ಸತ್ಯ ಘಟನೆಗಳ ಆಧಾರಿತವಾಗಿರು ಈ ಚಿತ್ರ ಕೇರಳದ ಯವತಿಯರನ್ನು ಮತಾಂತರ ಮಾಡಿ ಐಸಿಸಿ ಉಗ್ರ ಸಂಘಟನೆಗೆ ಸೇರಿಸುವ ಕುರಿತಂತೆ ಇದೆ.
ನಟಿ ಅದಾ ಶರ್ಮಾ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರಕ್ಕೆ ಸುದಿಪ್ತೋ ಸೇನ್ ನಿರ್ದೇಶನ ಇದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಚರ್ಚೆ ಹುಟ್ಟುಹಾಕಿದೆ. ಹಿಂದೂ ಕುಟುಂಬದಲ್ಲಿ ಹುಟ್ಟಿ, ಶಿವನ ಆರಾಧನೆ ಮಾಡುವ ಹುಡುಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡು ಐಸಿಸ್ ಸೇರುವ ಕಥೆಯನ್ನು ಈ ಸಿನಿಮಾ ಹೇಳುತ್ತಿದೆ. ಟ್ರೇಲರ್ನಲ್ಲಿರುವ ಹಲವು ವಿಚಾರಗಳು ಚರ್ಚೆ ಹುಟ್ಟುಹಾಕಿದೆ. ಅಂದಹಾಗೆ ಇದು ನೈಜ ಘಟನೆ ಆಧಾರಿತ ಸಿನಿಮಾ ಎಂದು ನಿರ್ದೇಶಕರು ಹೇಳಿದ್ದಾರೆ.
‘ದಿ ಕೇರಳ ಸ್ಟೋರಿ’ ನೈಜ ಘಟನೆ ಆಧಾರಿತವಾಗಿದ್ದು ಎಂದು ನಿರ್ದೇಶಕರು ಹೇಳಿದ್ದಾರೆ. 2022ರಲ್ಲಿ ರಿಲೀಸ್ ಆದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಹಿಟ್ ಆಯಿತು. ಕಾಶ್ಮೀರಿ ಪಂಡಿತರ ವಲಸೆ ಮತ್ತು ಅವರ ಹತ್ಯೆಯನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಂಡಿತ್ತು. ಈಗ ಮತ್ತೊಂದು ನೈಜ ಘಟನೆ ಆಧಾರಿತ ಸಿನಿಮಾ ಬರುತ್ತಿದ್ದು ಇದನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.