FILM
ದಿ ಕೇರಳ ಸ್ಟೋರಿ ಸಿನೆಮಾದ ಮಾಹಿತಿ ನಿಜ ಅಂತ ಸಾಭೀತು ಮಾಡಿದರೆ 1 ಕೋಟಿ ಬಹುಮಾನ
ಕೇರಳ ಮೇ 03: ಸದ್ಯ ದೇಶದಲ್ಲಿ ಟ್ರೆಂಡಿಂಗ್ ನಲ್ಲಿರುವ ದಿ ಕೇರಳ ಸ್ಟೋರಿ ಚಿತ್ರದ ಬಗ್ಗೆ ಭಾರೀ ವಿವಾದ ಎದ್ದಿದ್ದು, ಸಿನೆಮಾವನ್ನು ನಿಷೇಧಿಸಬೇಕೆಂಬ ಒತ್ತಾಯ ಕೇಳಿ ಬಂದಿದ್ದು, ಸುಪ್ರೀಂಕೋರ್ಟ್ ವರೆಗೂ ಚಿತ್ರ ವಿರೋಧಿಗಳು ಹೋಗಿದ್ದರು, ಆದರೆ ಸುಪ್ರೀಂಕೋರ್ಟ್ ತಡೆ ನೀಡಲು ನಿರಾಕರಿಸಿದೆ. ಈ ನಡುವೆ ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.
ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.
ಕಾಂಗ್ರೆಸ್ ಜೊತೆಗೆ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ ಕೂಡ ವಿರೋಧವನ್ನು ವ್ಯಕ್ತ ಪಡಿಸಿದ್ದು, ಸಂಘ ಪರಿವಾರದವರು ಸೇರಿಕೊಂಡು, ಒಂದು ಸಮುದಾಯದ ವಿರುದ್ಧ ಕೆಟ್ಟ ಅಭಿಪ್ರಾಯ ಹುಟ್ಟುವಂತೆ ಈ ಸಿನಿಮಾವನ್ನು ತೋರಿಸಲು ಹೊರಟಿದ್ದಾರೆ. ಇದು ಕೇರಳ ರಾಜ್ಯಕ್ಕೂ ಅಪಮಾನ ಮಾಡುವಂತಹ ಚಿತ್ರ. ಹಾಗಾಗಿ ಕೂಡಲೇ ಬಿಡುಗಡೆಯನ್ನು ತಡೆಯಬೇಕು ಎಂದು ಮನವಿ ಮಾಡಿವೆ.