Connect with us

BANTWAL

ಮನೆ ಮೇಲ್ಚಾವಣಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವು

ಬಂಟ್ವಾಳ ಜೂನ್ 14: ಮನೆ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಮನೆಯ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಮೃತರನ್ನು ಮಂಚಿ ಚೌಕದ ಪಾಲು ರಾಜೇಶ್ (36) ಎಂದು ಗುರುತಿಸಲಾಗಿದೆ. ಎರಡು ವರ್ಷಗಳ ಹಿಂದೆಯಷ್ಟೆ ರಾಜೇಶ್ ಮದುವೆಯಾಗಿದ್ದು ಮನೆಯ ಆಧಾರಸ್ತಂಭವಾಗಿದ್ದರು.

ಜೂನ್ 8 ರಂದು ರಾಜೇಶ್ ಅವರು ಪಕ್ಕದ ಮನೆಯವರ ಮಹಡಿ ಮೇಲೆ ಇಟ್ಟಿಗೆ ಕಟ್ಟುತ್ತಿದ್ದ ವೇಳೆ ಕಾಂಕ್ರೀಟ್ ಮೆಲ್ಚಾವಣಿಯಿಂದ ಅಕಸ್ಮಾತ್ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದರು.ನೆಲಕ್ಕೆ ಬಿದ್ದ ರಾಜೇಶ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.