ಚಿಕ್ಕಮಗಳೂರು, ಫೆಬ್ರವರಿ 11: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮದುವೆ ಮನೆಯೊಂದಕ್ಕೆ ನುಗ್ಗಿದ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ನಡೆಸಿ, ಮದುವೆಯ ಸಂಭ್ರಮವನ್ನೇ ಕೆಡಿಸಿರುವ ಘಟನೆ ನಡೆದಿದೆ.
ಕೇವಲ ಹಣಕ್ಕಾಗಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರ ನಡೆಗೆ ಮದುವೆಗೆ ಬಂದಿದ್ದ ಅತಿಥಿಗಳು ಹಾಗೂ ವಧು-ವರರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಡ್ಡ ಪ್ರವೀಣನ ಕೈಯಲ್ಲಿ ಮಗ್ಗಿ ಪುಸ್ತಕ
ಚಿಕ್ಕಮಗಳೂರು ನಗರದ ಪ್ರಸಿದ್ಧ ರಂಗಣ್ಣನ ಛತ್ರದಲ್ಲಿ ಇಂದು ವಿಜೃಂಭಣೆಯಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಹಸೆಮಣೆ ಏರಿದ್ದ ವಧು-ವರರಿಗೆ ಅತಿಥಿಗಳು ಶುಭ ಹಾರೈಸುತ್ತಿದ್ದ ವೇಳೆ ಇಬ್ಬರು ಮಂಗಳಮುಖಿಯರು ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸಂಪ್ರದಾಯದಂತೆ ಮದುವೆ ಮನೆಯವರು ಅವರಿಗೆ 500 ರೂಪಾಯಿ ಹಣ ನೀಡಲು ಮುಂದಾಗಿದ್ದಾರೆ. ಆದರೆ, 500 ರೂಪಾಯಿ ಪಡೆಯಲು ನಿರಾಕರಿಸಿದ ಮಂಗಳಮುಖಿಯರು, ಬರೋಬ್ಬರಿ 10,000 ರೂಪಾಯಿ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.