Connect with us

    DAKSHINA KANNADA

    ಉಪ್ಪಿನಂಗಡಿ ದೇವಳದ ನಾಪತ್ತೆಯಾಗಿದ್ದ ದೇವರ ಸರ ಪತ್ತೆ-ಬ್ಯಾಂಕಲ್ಲಿ ಅಡವಿಟ್ಟು ಸಾಲ ತೆಗೆದ ಅಧ್ಯಕ್ಷ..!

    ಉಪ್ಪಿನಂಗಡಿ :  ಉಪ್ಪಿನಂಗಡಿ ಪೆರ್ನೆಯ ಕಳೆಂಜ-ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸೇರಿದ ಆಭರಣಗಳು ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

    ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸದ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬೆನ್ನಿಗೆಯೇ ದೇವಳದ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು ನಾಪತ್ತೆಯಾದ ಚಿನ್ನಾಭರಣದೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ವರದಿಯಾಗಿದೆ.

    ಕಳೆದ ಡಿಸೆಂಬರ್‌ ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ಸಂದರ್ಭ ಭಕ್ತರೋರ್ವರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಆಭರಣಗಳು ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ನಾಪತ್ತೆಯಾದ ಚಿನ್ನಾಭರಣದೊಂದಿಗೆ ಪೊಲೀಸರಿಗೆ ಶರಣಾಗಿದ್ದು ಕುತೂಹಲ ಮೂಡಿಸಿದೆ.


    ಪೊಲೀಸರು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸುತ್ತದ್ದಂತೆಯೇ, ದೇಗುಲದ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು ಚಿನ್ನಾಭರಣದೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಅವರು ಈ ಚಿನ್ನಾಭರಣವನ್ನು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಅಡಮಾನವಿರಿಸಿ ಸಾಲ ಪಡೆದಿದ್ದರು ಎನ್ನಲಾಗಿದೆ. ಪ್ರಕರಣ ದಾಖಲಾಗುತ್ತಲೇ ರೋಹಿತಾಕ್ಷ ಬಾಣಬೆಟ್ಟುರವರು ಚಿನ್ನಾಭರಣವನ್ನು ಹಣಕಾಸು ಸಂಸ್ಥೆಯಿಂದ ಬಿಡಿಸಿಕೊಂಡು ನೇರವಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದರು.
    ತನ್ನ ಅಧ್ಯಕ್ಷೀಯ ಸ್ಥಾನದ ದುರುಪಯೋಗ ನಡೆಸಿ ದೇಗುಲದ ಚಿನ್ನಾಭರಣವನ್ನು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಇರಿಸಿದ ಆರೋಪದನ್ವಯ ಅವರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ದೇವಾಲಯದಲ್ಲಿ ಮಹಜರು ನಡೆಸಿ ಇಲಾಖಾ ಕ್ರಮಕೈಗೊಂಡಿದ್ದಾರೆ.ಈಗ ಭಕ್ತರೊಬ್ಬರು ಬ್ರಹ್ಮಕಲಶೋತ್ಸವದ ಸಂದರ್ಭ ನೀಡಿದ ಅಭರಣ ಪತ್ತೆಯಾಗಿದ್ದು, ಇನ್ನೊಬ್ಬ ಭಕ್ತ ರಾಮದಾಸ್ ರೈ ಎಂಬವರು ನೀಡಿದ್ದ ಚಿನ್ನದ ಸರ ಇನ್ನೂ ನಾಪತ್ತೆಯಾಗಿದ್ದು, ಅದರ ಬಗ್ಗೆಯೂ ತನಿಖೆ ಮುಂದುವರಿದಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply