KARNATAKA
ಪ್ರವೀಣ್ ನೆಟ್ಟಾರು ಕೊಲೆಗೈದವರು ಮಂಗಳೂರಿನವರೇ -ಗೃಹಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು, ಆಗಸ್ಟ್ 07: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮಂಗಳೂರಿನ ಸ್ಥಳೀಯರೇ ಭಾಗಿಯಾಗಿರುವ ಮಾಹಿತಿ ದೊರೆತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ಪ್ರವೀಣ್ ಕೊಲೆಗೈದವರು ಮಂಗಳೂರಿನವರೇ ಎಂಬುದು ತನಿಖೆಯಿಂದ ಗೊತ್ತಾಗಿದೆ. ಆರೋಪಿಗಳೂ ಯಾವ ಸಂಘಟನೆಗೆ ಸೇರಿದವರು, ಅವರ ಹಿನ್ನೆಲೆ ಏನು? ಎಂಬುದರ ಬಗ್ಗೆ ತನಿಖೆ ಮುಂದುವರೆದಿದೆ. ಕೊಲೆಗಾರರನ್ನು ಸೆರೆಹಿಡಿದು ತರುವ ಕಾರ್ಯ ಪೊಲೀಸರಿಂದ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.