LATEST NEWS
ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಸ್ಥಾನಕ್ಕೆ ಭಾಸ್ಕರ್ ಮೊಯಿಲಿ

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಸ್ಥಾನಕ್ಕೆ ಭಾಸ್ಕರ್ ಮೊಯಿಲಿ
ಮಂಗಳೂರು, ಮಾರ್ಚ್ 08 : ಹಿರಿಯ ಪಾಲಿಕೆ ಸದಸ್ಯ ಭಾಸ್ಕರ್ ಮೊಯಿಲಿಯನ್ನು ಕಾಂಗ್ರೆಸ್ ಪಕ್ಷದ ಸದಸ್ಯರು ಇಂದಿನ ಮೇಯರ್ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು ಆಯ್ಕೆ ಮಾಡಿದ್ದಾರೆ.
ಇನ್ನೂ ಕೆಲವೇ ಗಂಟೆಗಳಲ್ಲಿ ನಡೆಯುವ ಚುನಾವಣೆಯಲ್ಲಿ ಭಾಸ್ಕರ್ ಮೊಯಿಲಿ ಅವರು ಮೇಯರ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ,

ಕಾಂಗ್ರೆಸ್ ಕಾರ್ಪೊರೇಟರ್ ಗಳ ಸಭೆ ಇಂದು ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಈ ಸಭೆಯಲ್ಲಿ ಈ ಬಾರಿಯ ಮೇಯರ್ ಸ್ಥಾನಕ್ಕೆ ಹಿರಿಯ ಸದಸ್ಯರಾದ ಭಾಸ್ಕರ್ ಮೊಯಿಲಿಯ ಹೆಸರನ್ನು ಪಕ್ಷವು ಒಪ್ಪಿಗೆ ನೀಡಿ ಅಂತಿಮಗೊಳಿಸಿತು.
ಶಾಸಕರುಗಳಾದ ಜೆ ಆರ್ ಲೋಬೋ, ಮೊಯಿದಿನ್ ಬಾವಾ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಹಾಗೂ ಪ್ರಸ್ತುತ ಮೇಯರ್ ಕವಿತಾ ಸನಿಲ್ ಅವರು ಸಭೆಯಲ್ಲಿ ಭಾಗವಹಿಸಿದ್ದರು.