LATEST NEWS
ಮಿಸ್ ದಿವಾ ಯುನಿವರ್ಸ್-2022 ಗೆದ್ದ ಮಂಗಳೂರಿನ ದಿವಿತಾ ರೈ…!!

ಮುಂಬೈ: ಸೌಂದರ್ಯ ಸ್ಪರ್ಧೆಯಲ್ಲಿ ಕರಾವಳಿಗರ ಪಾರಮ್ಯ ಮುಂದುವರೆದಿದ್ದು, ಇದೀಗ ಮಂಗಳೂರು ಮೂಲದ ದಿವಿತಾ ರೈ ಪ್ರತಿಷ್ಠಿತ ಲಿವಾ ಮಿಸ್ ದಿವಾ ಯುನಿವರ್ಸ್-2022 ಸೌಂದರ್ಯ ಸ್ಪರ್ಧೆ ಗೆದ್ದಿದ್ದಾರೆ.
ಮುಂಬೈನಲ್ಲಿ ನಡೆದ ಮಿಸ್ ದಿವಾ ಯುನಿವರ್ಸ್ 2022 ಸ್ಪರ್ಧೆಯಲ್ಲಿ 2021ರ ಮಿಸ್ ಯುನಿವರ್ಸ್ ಹರ್ನಾಝ್ ಸಂಧು ಅವರು ಲಿವಾ ಮಿಸ್ ದಿವಾ 2022 ಪ್ರಶಸ್ತಿ ಕಿರೀಟ ತೊಡಿಸಿದರು. 23 ವರ್ಷ ವಯಸ್ಸಿನ ಇವರು ಮಿಸ್ ಯುನಿವರ್ಸ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಮಂಗಳೂರಿನಲ್ಲಿ ಜನಿಸಿದ ದಿವಿತಾ ರೈ ಅವರ ತಂದೆ ದಿಲೀಪ್ ರೈ ಹಾಗೂ ತಾಯಿ ಪವಿತ್ರಾ ರೈ. ತಂದೆಯ ಉದ್ಯೋಗದ ಕಾರಣದಿಂದಾಗಿ ದಿವಿತಾ ಬೇರೆ ಬೇರೆ ಸ್ಥಳಗಳಲ್ಲಿ ಬೆಳೆದಿದ್ದರು. ಮುಂಬೈನಲ್ಲಿ ನೆಲೆಸಿರುವ ಅವರು ಜೆ.ಜೆ.ಕಾಲೇಜ್ ಆಫ್ ಆರ್ಕಿಟೆಕ್ಚರ್ ನಲ್ಲಿ ಪದವಿ ಪಡೆದಿದ್ದಾರೆ. ಇವರ ಅಣ್ಣ ದೈವಿಕ್ ರೈ ಕ್ರಿಕೆಟಿಗ. ಭಾರತದ ಒಳಾಂಗಣ ಕ್ರಿಕೆಟ್ ತಂಡದ ಸದಸ್ಯರಾಗಿರುವ ಇವರು 2017ರ ಒಳಾಂಗಣ ಕ್ರಿಕೆಟ್ ವಿಶ್ವಕಪ್ ಜಯಿಸಿದ ಭಾರತ ತಂಡದಲ್ಲಿದ್ದರು.