Connect with us

DAKSHINA KANNADA

ಉಡುಪಿ ಹತ್ಯಾಕಾಂಡಕ್ಕೆ ಆರೋಪಿ ಪ್ರವೀಣ್ ಚೌಗಲೆ ಬಳಸಿದ್ದ ಚೂರಿ ವಶಕ್ಕೆ ಪಡೆದ ಪೊಲೀಸರು..!

ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಹಂತಕ ಪ್ರವೀಣ್ ಚೌಗುಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನ.15ರಂದು ಬೆಳಗಾವಿಯ ಕುಡುಚಿಯಲ್ಲಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬಂಧಿಸಿ, ನ.16ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದರು.

ನಂತರ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಕೃತ್ಯಕ್ಕೆ ಬಳಸಿದ ಆಯುಧಕ್ಕಾಗಿ ಶೋಧ ಕಾರ್ಯ ನಡೆಸಿದ್ದರು.

ವಿಚಾರಣೆಯಲ್ಲಿ ಸಮರ್ಪಕ ಮಾಹಿತಿ ನೀಡದೆ ಆರೋಪಿ ಪೊಲೀಸರನ್ನು ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದನು. ಮೊದಲು ಕೃತ್ಯಕ್ಕೆ ಎಸಗಿ ಉಡುಪಿಯಿಂದ ಮಂಗಳೂರಿಗೆ ಹೋಗುವಾಗ ದಾರಿ ಮಧ್ಯೆ ಸೇತುವೆಯಿಂದ ನದಿಗೆ ಎಸೆದಿದ್ದೆ ಎಂದು ಹೇಳಿದ್ದ ಪ್ರವೀಣ್, ಬಳಿಕ ಅದನ್ನು ತನ್ನ ಮಂಗಳೂರಿನ ಮನೆಯ ಬಳಿ ವಿಲೇವಾರಿ ಮಾಡಿದ್ದೆ ಎಂದು ತಿಳಿಸಿದ್ದನು.

ಈ ಆಧಾರದಲ್ಲಿ ಮನೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ  ಆಯುಧಕ್ಕಾಗಿ ಒಂದು ಇಡೀಯ ದಿನ ತೀವ್ರ ಶೋಧ ನಡೆಸಿದಾಗ, ಆತನ ಬಿಜೈ ಫ್ಲ್ಯಾಟ್‌ನಲ್ಲಿ ಕೃತ್ಯಕ್ಕೆ ಬಳಸಿಕ ಚೂರಿ ಪತ್ತೆಯಾಗಿತ್ತು. ಅದಲ್ಲದೆ ಕೃತ್ಯಕ್ಕೆ ಬಳಸಿದ ಮಾಸ್ಕ್, ರಕ್ತಸಿಕ್ಕ ಬಟ್ಟೆ, ಕೃತ್ಯಕ್ಕೆ ಬಳಸಿದ ಕಾರು ಸೇರಿದಂತೆ ಎಲ್ಲ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

‘ಆರೋಪಿ ಪ್ರವೀಣ್ ಚೌಗುಲೆ ಅಪರಾಧ ಕೃತ್ಯ ಎಸಗುವ ಸಂದರ್ಭದಲ್ಲಿ ಬಳಸಿದ ಚೂರಿ ಮತ್ತು ಇತರ ವಸ್ತುಗಳನ್ನು ನಿನ್ನೆ ಮತ್ತು ಇಂದು ವಶಕ್ಕೆ ಪಡೆದುಕೊಳ್ಳಲಾಗಿದೆ. ಉಳಿದ ಮಾಹಿತಿಗಳನ್ನು ತನಿಖೆ ಸಂಪೂರ್ಣಗೊಂಡ ಬಳಿಕ ನೀಡಲಾಗುವುದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಕೆ ಅರಣ್ ಹೇಳಿದ್ದಾರೆ.

 

Share Information
Advertisement
Click to comment

You must be logged in to post a comment Login

Leave a Reply