Connect with us

KARNATAKA

ಇಂದು ಮಧ್ಯರಾತ್ರಿಯಿಂದಲೇ ನಂದಿನಿ ಹಾಲು, ಮೊಸರಿನ ದರ 3 ರೂ. ಏರಿಕೆ

ಬೆಂಗಳೂರು, ನವೆಂಬರ್ 14 : ನಂದಿನಿ ಹಾಲು ಮತ್ತು ಮೊಸರಿನ ದರ ಇಂದು ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್‌ 3 ರೂ. ಏರಿಕೆಯಾಗಲಿದೆ.

ಸದ್ಯ ರೈತರಿಂದ ಪ್ರತಿ ಲೀಟರ್ ಹಾಲನ್ನು ಕೆಎಂಎಫ್‌() ಸರಾಸರಿ 29 ರೂ.ಗೆ ಖರೀದಿ ಮಾಡುತ್ತಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ‌ ಪ್ರತಿ ಲೀಟರ್ ಗೆ 5 ರೂ ಸಹಾಯಧನ ಕೂಡ ರೈತರಿಗೆ ನೀಡಲಾಗುತ್ತಿದೆ. ಈಗ ಏರಿಕೆ ಮಾಡಿದ ಹಣವನ್ನು ರೈತರಿಗೆ ನೀಡುವ ಪ್ಲಾನ್ ಮಾಡಲಾಗಿದೆ.

ಹವಾಮಾನ ವೈಪರೀತ್ಯ ಕಾರಣದಿಂದ ಮೇವು ಸಿಗುತ್ತಿಲ್ಲ. ಮೇವಿನ ಬೆಲೆ ಭಾರೀ ಏರಿಕೆಯಾಗಿದೆ. ಇದರ ಜೊತೆ ಹಸುವಿಗೆ ಚರ್ಮ ಗಂಟು ರೋಗ ಬಾಧಿಸುತ್ತಿದೆ. ಅಷ್ಟೇ ಅಲ್ಲದೇ ಸಾಗಾಣಿಕೆ , ವಿದ್ಯುತ್ , ಪ್ಯಾಕಿಂಗ್ ಇತ್ಯಾದಿ ವೆಚ್ಚ ಶೇ.25 – 35 ರಷ್ಟು ಹೆಚ್ಚಾಳವಾಗಿದೆ. ಈ ಕಾರಣಕ್ಕೆ ಹಾಲು ಮತ್ತು ಮೊಸರಿನ ಬೆಲೆಯನ್ನು ಏರಿಕೆ ಮಾಡಲಾಗಿದೆ.

Advertisement
Click to comment

You must be logged in to post a comment Login

Leave a Reply