KARNATAKA
ಮೀನು ಹಿಡಿಯುವ ವಿಚಾರದಲ್ಲಿ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ ..!
ಕೋಲಾರ: ಮೀನು ಹಿಡಿಯುವ ವಿಚಾರದಲ್ಲಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನಡೆದಿದೆ.
ಲೋಕೇಶ್ ಕೊಲೆಯಾದ ಯುವಕ. ಮತ್ತೋರ್ವ ಯುವಕ ದರ್ಶನ್ಗೆ ಗಂಭೀರ ಗಾಯವಾಗಿದ್ದು, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೀನು ಹಿಡಿಯುವ ವಿಚಾರದಲ್ಲಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದಿದ್ದು, ಈ ಕುರಿತು ನ್ಯಾಯ ಪಂಚಾಯಿತಿ ವೇಳೆ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಟೇಕಲ್ನ ಈಶ್ವರ ಕೆರೆಯಲ್ಲಿ ಮೀನು ಹಿಡಿಯುವಾಗ ಗಲಾಟೆ ನಡೆದಿತ್ತು. ಈ ಹಿನ್ನಲೆ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ನಡೆಸಲಾಗುತ್ತಿತ್ತು. ಈ ಸಂದರ್ಭ ಸಹೋದರ ಸಂಬಂಧಿ ಪ್ರಮೋದ್ ಎಂಬಾತ ಚಾಕುವಿನಿಂದ ತಿವಿದಿದ್ದಾನೆ. ಕೂಡಲೇ ಗಾಯಾಳು ಲೋಕೇಶ್ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಮತ್ತೊಬ್ಬ ಗಾಯಾಳು ದರ್ಶನ್ಗೆ ಚಿಕಿತ್ಸೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಕೋಲಾರ ಎಸ್ಪಿ ನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಈ ಕುರಿತು ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.