Connect with us

LATEST NEWS

ಸರಕಾರದ ಆದೇಶ ವಿರುದ್ದ ತಿರುಗಿಬಿದ್ದ ವಿಧ್ಯಾರ್ಥಿನಿಯರು…ಹಿಜಬ್ ಧರಿಸಿಯೇ ಕಾಲೇಜಿಗೆ ಎಂಟ್ರಿ…!!

ಉಡುಪಿ ಫೆಬ್ರವರಿ 01: ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರು ಹಿಜಬ್ ವಿವಾದ ದಿನದಿಂದ ದಿನಕ್ಕೆ ಮತ್ತೆ ಕಗ್ಗಾಂಟಗುತ್ತಲೆ ಇದ್ದು, ನಿನ್ನೆ ಶಾಸಕರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಮುಷ್ಕರ ನಿರತ ವಿಧ್ಯಾರ್ಥಿನಿಯರು ಇಂದು ಕಾಲೇಜು ಆವರಣ ಪ್ರವೇಶಿಸಿದ್ದಾರೆ. ಧಾರ್ಮಿಕ, ಸಾಂವಿಧಾನಿಕ ಹಕ್ಕಾದ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತೇವೆ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ವಿಧ್ಯಾರ್ಥಿನಿಯರು ಹಿಜಬ್ ಧರಿಸುವುದು ನಮ್ಮ ಸಾಂವಿಧಾನಿಕ ಹಕ್ಕಾಗಿದ್ದು, ನಾವು ಕಾಲೇಜಿಗೆ ಹಿಜಬ್ ಧರಿಸಿಯೇ ತರಗತಿಗೆ ಪ್ರವೇಶಿಸುವುದು ಎಂದು ತಿಳಿಸಿದ್ದಾರೆ. ಈಗಾಗಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೂಲಕ ಹೋರಾಟ ಮುಂದುವರೆಸಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ ಬೆದರಿಕೆ ಒಡ್ಡಿದ್ದು, ಕಾಲೇಜು ಆವರಣಕ್ಕೆ ಪ್ರವೇಶ ನೀಡುವುದಿಲ್ಲ ಎಂದು ಹೆದರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಕಾಲೇದು ಆವರಣದಲ್ಲಿ ಪೊಲೀಸರು ನಮ್ಮನ್ನು ಪ್ರವೇಶಿಸದಂತೆ ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ.


ಇನ್ನು ಟ್ವೀಟ್ ಮಾಡಿರುವ ವಿದ್ಯಾರ್ಥಿನಿ ಆಲಿಯಾ ಧಾರ್ಮಿಕ, ಸಾಂವಿಧಾನಿಕ ಹಕ್ಕಾದ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತೇವೆ. ಅದು ನಾವು ತೆರಿಗೆ ಪಾವತಿಸುವ ಸರ್ಕಾರಿ ಕಾಲೇಜು. ಯಾರು ಕೂಡ ಹಸ್ತಕ್ಷೇಪ ಮಾಡುವ ಅವಶ್ಯಕತೆಯಿಲ್ಲ. ಬೆದರಿಕೆಗಳಿಂದ ನಮ್ಮ ನ್ಯಾಯಪರ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.


ಮತ್ತೊರ್ವ ವಿದ್ಯಾರ್ಥಿ ಮಸೂದ್ ಟ್ವೀಟ್ ಮಾಡಿ, ಹಿಜಾಬ್ ಧರಿಸುವುದಕ್ಕೆ ಹಿಂದಿನಿಂದಲೂ ಯಾರೂ ನಿರ್ಬಂಧಿಸುವುದಿಲ್ಲ, ಹಿಜಾಬ್ ವಿರುದ್ಧ ತಿರುಗುವ ಯಾವುದೇ ಪಿತೂರಿಗಳು ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇಂದು ಹಿಜಾಬ್ ಧರಿಸಿ ತರಗತಿಗೆ ಹಾಜರಾದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ಮಂಗಳವಾರ ಆಯಾ ತರಗತಿಯಿಂದ ಹೊರಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಕಾಲೇಜಿನ ಆವರಣದಲ್ಲಿ ಮಾಧ್ಯಮದವರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Advertisement
Click to comment

You must be logged in to post a comment Login

Leave a Reply