Connect with us

    DAKSHINA KANNADA

    ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದ ಟೋಲ್ ಸಂಗ್ರಹ ಕೇಂದ್ರದ ಆದೇಶ ತಡೆ ಹಿಡಿದ ರಾಜ್ಯ ಸರ್ಕಾರ..!

    ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರದ ಆದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಈ ಟೋಲ್ ಕೇಂದ್ರ  ಸ್ಥಗಿತಗೊಳಿಸಲು ತೀರ್ಮಾನಿಸಿದೆ.

    ಟೋಲ್ ಕೇಂದ್ರಕ್ಕೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ  ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಂದ  ಈ  ಅಧಿಕೃತ ಆದೇಶ ಹೊರ ಬಿದ್ದಿದೆ.

    ಸಚಿವರು ನೀಡಿದ ಆದೇಶದ ವಿವರ ಹೀಗಿದೆ.

    ನನ್ನ ಅಧ್ಯಕ್ಷತೆಯಲ್ಲಿ ದಿನಾಂಕ: 22.08.2024 ರಂದು ಉಡುಪಿ ಜಿಲ್ಲೆಯ ಪ್ರತಿನಿಧಿಗಳೊಂದಿಗೆ ಪಡುಬಿದ್ರಿ- ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವಂತಹ ಟೋಲ್‌ಗೇಟ್ – ಸುಂಕ ವಸೂಲಾತಿ ಕೇಂದ್ರದಿಂದ ಉದ್ಭವಿಸಿರುವಂತಹ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಸದರಿ ಸಭೆಯಲ್ಲಿ, ಮೇಲ್ಕಂಡ ಟೋಲ್ ಪ್ಲಾಝಾ ನಿರ್ಮಾಣ ಕಾರ್ಯವನ್ನು ಭಾರತೀ ಕನ್ಸಕ್ಷನ್ ಸಂಸ್ಥೆಯ ವತಿಯಿಂದ ಪ್ರಾರಂಭಿಸಲು ಕೆ.ಆರ್.ಡಿ.ಸಿ.ಎಲ್. ಮೂಲಕ ಕಾರ್ಯಾದೇಶವನ್ನು ನೀಡಲಾಗಿರುವುದಾಗಿ, ಆದರೆ, ಸದರಿ ಕಂಚಿನಡ್ಕ ಪ್ರದೇಶವು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ವಾಹನ ದಟ್ಟಣೆ ಇರುವ ರಸ್ತೆಯನ್ನು ಹೊಂದಿದ್ದು, ಈವರೆವಿಗೂ ಡಿವೈಡರ್‌ಗಳ ನಿರ್ಮಾಣವಾಗಲಿ, ಸರ್ವಿಸ ರಸ್ತೆ, ಶೌಚಾಲಯ ನಿರ್ಮಾಣ, ವಿಶ್ರಾಂತಿ ಗೃಹವಾಗಲಿ ನಿರ್ಮಾಣವಾಗಿರುವುದಿಲ್ಲವೆಂದು ತಿಳಿಸಿರುತ್ತಾರೆ. ಮುಂದುವರೆದಂತೆ, ಈಗಾಗಲೇ ಪಡುಬಿದ್ರಿ ಜಂಕ್ಷನ್‌ನಿಂದ ರಾಜ್ಯ ಹೆದ್ದಾರಿ-66 ರಲ್ಲಿನ ಪಡುಬಿದ್ರಿ ಜಂಕ್ಷನ್‌ನಿಂದ ಮಂಗಳೂರು ಕಡೆಗೆ 5 ಕಿ.ಮೀ. ನಲ್ಲಿರುವ ಹೆಜಮಾಡಿ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಟೋಲ್ ನಿರ್ಮಿಸಿ ಶುಲ್ಕ ಸಂಗ್ರಹಣೆ ಮಾಡಲಾಗುತ್ತಿದ್ದು, ಉದ್ದೇಶಿತ ಕಂಚಿನಡ್ಕ ಪ್ರದೇಶವು ಕೇವಲ ನಿರ್ಮಾಣ ಟೋಲ್ ಪ್ಲಾಜಾ ಕಾರ್ಯವು ಆತುರದ ಕಿ.ಮೀ. ದೂರದಲ್ಲಿರುವುದರಿಂದ, ಈ ಸದರಿ ರಸ್ತೆಯಲ್ಲಿ ಓಡಾಡುವಂತಹ ನಿರ್ಧಾರವಾಗಿರುವುದಲ್ಲದೇ ಪ್ರತಿನಿತ್ಯ ಈ ರಸ್ತೆಯನ್ನೆ ಅವಲಿಂಬಿಸಿರುವ, 7.50 ಕ್ಯಾಬ್ ಮತ್ತು ಆಟೋ ಸುತ್ತಮುತ್ತಲಿನ ಗ್ರಾಮಸ್ಥರು, ವಿದ್ಯಾರ್ಥಿಗಳು, ಸಣ್ಣ ವ್ಯಾಪಾರಸ್ಥರು, ಕಾರ್ಮಿಕರು, ಚಾಲಕರುಗಳು ಎರಡು ಬಾರಿ ಶುಲ್ಕವನ್ನು ಭರಿಸಬೇಕಾಗುತ್ತದೆ. ಇದರಿಂದ ಆರ್ಥಿಕವಾಗಿ ಸದರಿಯವರುಗಳು ತೊಂದರೆಗೊಳಗಾಗುತ್ತಾರೆಂದು ಸಭೆಯಲ್ಲಿದ್ದ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿ, ಸುಂಕ ವಸೂಲಾತಿ ಕೇಂದ್ರವನ್ನು ರದ್ದುಪಡಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ. ಅಲ್ಲದೇ ಇಲಾಖೆಯ ಈ ಕ್ರಮದ ಬಗ್ಗೆ ದಿ: 24.08.2024ರ ಶನಿವಾರದಂದು ಸ್ಥಳೀಯ ಹೋರಾಟ ಸಮಿತಿಗಳೊಂದಿಗೆ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದು, ಪ್ರತಿಭಟನಾ ಸಭೆಯನ್ನೂ ಸಹ ನಡೆಸುತ್ತಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಈಗಾಗಲೇ ಪತ್ರಿಕೆಗಳಲ್ಲೂ ಸಾರ್ವಜನಿಕ ಅಭಿಪ್ರಾಯ ವ್ಯಕ್ತವಾಗಿದ್ದು, ಪ್ರತಿಗಳನ್ನು ಈ ಪತ್ರದೊಂದಿಗೆ ಲಗತ್ತಿಸಿದೆ. ಈ ವಿಷಯವು ಸಾರ್ವಜನಿಕ ಹಿತದೃಷ್ಟಿಯಿಂದಾಗಿ ಸೂಕ್ಷ್ಮತೆಯಿಂದ ಕೂಡಿರುವುದರಿಂದ, ಮೇಲ್ಕಂಡಂತೆ ಕಂಚಿನಡ್ಕ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲು ಉದ್ದೇಶಿಸಿರುವ ಸುಂಕ ವಸೂಲಾತಿ ಕೇಂದ್ರದ ಬಗ್ಗೆ ಮತ್ತೊಮ್ಮೆ ಕೂಲಂಕಷವಾಗಿ ಪರಿಶೀಲಿಸಿ, ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವವರೆವಿಗೆ ಸದರಿ ಸಂಸ್ಥೆಗೆ ನೀಡಲಾಗಿರುವ ಕಾರ್ಯಾದೇಶ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದು, ಕಂಚಿನಡ್ಕ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆಯನ್ನು ಯಥಾಸ್ಥಿತಿಯಲ್ಲಿ ಮುಂದುವರೆಸುವ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply