LATEST NEWS
ಸಾಲದ ಸುಳಿಗೆ ಸಿಲುಕಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣು

ಪಂಚಕುಲ ಮೇ 27: ಸಾಲ ಸುಳಿಗೆ ಸಿಲುಕಿದ ಕುಟುಂಬವೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಪಂಚಕುಲದಲ್ಲಿ ನಿನ್ನೆ ರಾತ್ರಿ ನಿಲ್ಲಿಸಿದ್ದ ಕಾರಿನಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಮೃತಪಟ್ಟಿದ್ದು ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನಪ್ಪಿದ್ದಾನೆ.
ಮೂಲಗಳ ಪ್ರಕಾರ, ಕುಟುಂಬವು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿದ್ದರಿಂದ ಈ ಕಠಿಣ ಕ್ರಮ ಕೈಗೊಂಡಿದೆ. ಡೆಹ್ರಾಡೂನ್ನ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತನ್ನ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್ಗೆ ಹಿಂತಿರುಗಿದ ನಂತರ ಕಳೆದ ಭಾನುವಾರ ಈ ಘಟನೆ ನಡೆದಿದೆ.
ಕಾರಿನೊಳಗೆ ಕುಟುಂಬ ಸದಸ್ಯರು ಹೆಣಗಾಡುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆಗಮಿಸುತ್ತಿದ್ದಂತೆಯೇ ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಖಾಸಗಿ ಮತ್ತು ನಾಗರಿಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಪ್ರವೀಣ್ ಮಿತ್ತಲ್ (42ವ), ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳೆಂದು ಗುರುತಿಸಲಾಗಿದೆ. ಆರಂಭಿಕ ತನಿಖೆಯ ನಂತರ, ಇದು ಆತ್ಮಹತ್ಯೆ ಪ್ರಕರಣದಂತೆ ತೋರುತ್ತಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಆಗಮಿಸಿ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ವಿಶ್ಲೇಷಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹಿಮಾದ್ರಿ ಕೌಶಿಕ್ ಹೇಳಿದ್ದಾರೆ.