LATEST NEWS
ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನ ತೆಗೆಸಿದ ಶಿಕ್ಷಕರು, ಆಕ್ರೋಶ ವ್ಯಕ್ತಪಡಿಸಿದ ಪೋಷಕರು…
ಪುತ್ತೂರು,ಸೆಪ್ಟೆಂಬರ್ 19: ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವನ್ನು ಶಾಲೆಯಲ್ಲಿ ಬಿಚ್ಚಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳ ಪೋಷಕರು, ಸಂಘಟನೆಯ ಕಾರ್ಯಕರ್ತರು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪುತ್ತೂರು ತಾಲೂಕಿನ ಪಾಪೆ ಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 19 ರಂದು ನಡೆದಿದೆ.
ಈ ಸಂಬಂಧ ಪೋಷಕರು ಶಾಲಾ ಮುಖ್ಯೋಪಾಧ್ಯಾಯರ ಜೊತೆ ಮಾತುಕತೆ ನಡೆಸಿ ಮತ್ತೆ ಮಕ್ಕಳ ಕೈಗೆ ರಕ್ಷಾಬಂಧನವನ್ನು ಕಟ್ಟಿಸಿದ್ದು, ಪ್ರಕರಣವು ಸುಖಾಂತ್ಯ ಕಂಡಿದೆ. ಪಾಪೆಮಜಲು ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿದ್ದ ರಕ್ಷಾಬಂಧನವನ್ನು ಬಿಚ್ಚುವಂತೆ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ತಿಳಿಸಿದ್ದು, ಈ ಬಗ್ಗೆ ಅರಿತ ಮಕ್ಕಳ ಪೋಷಕರು ಶಾಲೆಗೆ ಬಂದು ಮುಖ್ಯೋಪಾಧ್ಯಾಯರಾದ ತೆರೇಜ್ ಎಂ ಸಿಕ್ವೇರಾ ಮತ್ತು ಶಿಕ್ಷಕರ ಜೊತೆ ಮಾತುಕತೆ ನಡೆಸಿದರು.
ಈ ವೇಳೆ ಶಾಲಾ ಮುಖ್ಯೋಪಾಧ್ಯಾಯರು ಮಾತನಾಡಿ, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅದನ್ನು ಬಿಚ್ಚುವಂತೆ ಹೇಳಿದ್ದೆ ಹೊರತು ಬೇರೆ ಯಾವ ವಿಧದಿಂದಲೂ ಅಲ್ಲ, ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವು ತುಂಬಾ ಕಪ್ಪಾಗಿದ್ದು, ಈ ಹಿನ್ನೆಲೆ ಮಕ್ಕಳ ಆರೋಗ್ಯ ಕಾಳಜಿಯಿಂದಾಗಿ ಅದನ್ನು ಬಿಚ್ಚಿಡುವಂತೆ ಹೇಳಿದ್ದಾಗಿ ಹೇಳಿದರು.