Connect with us

    LATEST NEWS

    ಲೋಕಸಭೆ, ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ‘ಒಂದು ರಾಷ್ಟ್ರ ಒಂದು ಚುನಾವಣೆ’ಗೆ ಕೇಂದ್ರ ಸಂಪುಟ ಅಸ್ತು..!

    ಹೊಸದಿಲ್ಲಿ : ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದಿಂದ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ರಾಮನಾಥ್​ ಕೋವಿಂದ್ ಸಮಿತಿ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

     

    ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ.ಒಂದು ರಾಷ್ಟ್ರ, ಒಂದು ಚುನಾವಣೆ(One Nation One Election) ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆ ಮೇಲೆ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ್ದರು. ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

    ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಉನ್ನತ ಮಟ್ಟದ ಸಮಿತಿಯು ಈ ವರ್ಷದ ಮಾರ್ಚ್‌ನಲ್ಲಿ ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದೆ.ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆದ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆಯೂ ಸಮಿತಿ ಶಿಫಾರಸು ಮಾಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply