Connect with us

    LATEST NEWS

    ಅಂಗಡಿ ಮುಚ್ಚೋಕೆ ಹೇಳಿದ ಪೋಲಿಸರಿಗೆ ಥಳಿಸಿದ ಗ್ರಾಮಸ್ಥರು

    ಭೋಪಾಲ್,ಮೇ 29​: ಕರೊನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. ಹಾಗಿದ್ದರೂ ಅಂಗಡಿ ತೆರೆದಿದ್ದ ಗ್ರಾಮಕ್ಕೆ ಭೇಟಿ ಕೊಟ್ಟ ಪೊಲೀಸ್​ ಅಧಿಕಾರಿಗಳು ಅಂಗಡಿ ಮುಚ್ಚಿಸಲು ಪ್ರಯತ್ನಿಸಿದ್ದಕ್ಕೆ ಗ್ರಾಮಸ್ಥರೆಲ್ಲ ಸೇರಿ ಅಧಿಕಾರಿಗಳಿಗೇ ಥಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿದೆ. ಆದರೆ ಅದನ್ನು ಲೆಕ್ಕಿಸದ ಗ್ರಾಮಸ್ಥರು ಮೇ 28ರಂದು ಮಾಮೂಲಿನಂತೆ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಲಾಕ್​ಡೌನ್​ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂದು ಪರಿಶೀಲಿಸಲು ಬಂದ ಪೊಲೀಸರು ಗ್ರಾಮಸ್ಥರ ನಡವಳಿಕೆಯಿಂದ ಬೇಸರಗೊಂಡಿದ್ದಾರೆ.

    ಅಂಗಡಿಗಳನ್ನು ಕೂಡಲೇ ಮುಚ್ಚುವಂತೆ ತಿಳಿಸಿದ್ದಾರೆ. ಅಂಗಡಿ ಮುಚ್ಚಿಸುವ ವೇಳೆ ಪೊಲೀಸ್​ ಅಧಿಕಾರಿ ಅಲ್ಲಿನ ಗ್ರಾಮಸ್ಥರೊಬ್ಬರ ತಲೆಗೆ ಹೊಡೆದರು ಎನ್ನಲಾಗಿದೆ. ಅದೇ ಕಾರಣಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *