LATEST NEWS
ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆ…!?

ಉಡುಪಿ , ಅಕ್ಟೋಬರ್ 25: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾಗಿದ್ದಾನೆ. ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಯುವತಿ ಮೃತಪಟ್ಟಿದ್ದಾಳೆ.
ಇದು ಉಡುಪಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿರುವ ಘಟನೆಯಾಗಿದೆ, ನಿನ್ನ 6:30 ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಕರೆದು ತಂದಿದ್ದ ಯುವಕ ಆಸ್ಪತ್ರೆಯಲ್ಲಿ ದಾಖಲುಮಾಡಿದ್ದಾನೆ. ನಂತರ ಯುವತಿಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಯುವಕ ನಾಪತ್ತೆಯಾಗಿದ್ದಾನೆ.

ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿಯಾಗಿದ್ದಾಳೆ. ರಕ್ಷಿತಾ ನಾಯಕ್ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿ ಎಂದು ತಿಳಿದುಬಂದಿದೆ. ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ಯುವತಿ ವಾಸ್ತವ್ಯವಿದ್ದಳು.
ಹದಿನೈದು ದಿನಕ್ಕೊಮ್ಮೆ ರಕ್ಷಿತಾ ನಾಯಕ್ ಮನೆಗೆ ಹೋಗಿ ಬರುತ್ತಿದ್ದಳು. ಪ್ರವೀಣ್ ಕುಂದರ್ ರಕ್ಷಿತಾ ಳನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಿಟ್ಟುಹೋದ ಯುವಕನಾಗಿದ್ದಾನೆ. ಯುವಕನ ಪತ್ತೆಗಾಗಿ ಹಿರಿಯಡ್ಕ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ರಕ್ಷಿತಾಳ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆಮಾಡಲಾಗಿದೆ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.