LATEST NEWS
ದೇವಸ್ಥಾನದ ಕಾಣಿಕೆ ಡಬ್ಬಿ ಕಳ್ಳತನ – ವಿಶ್ವಹಿಂದೂ ಪರಿಷತ್ ಸಂಚಾಲಕ ಅರೆಸ್ಟ್
ಮಂಗಳೂರು ಮಾರ್ಚ್ 8: ಬೈಕ್, ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಂಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂದು ಗುರುತಿಸಲಾಗಿದ್ದು, ಇತ ವಿಶ್ವಹಿಂದೂಪರಿಷತ್ ಹಾಗೂ ಬಜರಂಗದಳ ಉಳ್ಳಾಲ ಗ್ರಾಮಾಂತರ ಪ್ರಖಂಡದ ಸಂಚಾಲಕ ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯರಾತ್ರಿ ಸಿಸಿಟಿವಿಯಲ್ಲಿ ದೊರೆತ ಮಾಹಿತಿ ಆಧಾರದಲ್ಲಿ ಸಾರ್ವಜನಿಕರೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪವು ಬಳಿಯ ಮನೆಯೊಂದರಿಂದ ಬೈಕ್ ಕಳವು ನಡೆಸಿದ್ದು, ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
You must be logged in to post a comment Login