LATEST NEWS
ನೀರುಮಾರ್ಗ – ಭಜನಾ ಮಂದಿರದಿಂದ ಕಾಣಿಕೆ ಡಬ್ಬಿ ಹೊತ್ತೊಯ್ದ ಕಳ್ಳರು..!!
ಮಂಗಳೂರು ಜುಲೈ 22: ಮಂಗಳೂರಿನ ನೀರುಮಾರ್ಗ ಎಂಬಲ್ಲಿ ಭಜನಾ ಮಂದಿರಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯನ್ನು ಕದ್ದೊಯ್ದಿದ್ದಾರೆ. ಕಳ್ಳರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನೀರುಮಾರ್ಗ ಎಂಬಲ್ಲಿನ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ನುಗ್ಗಿದ್ದಾರೆ. ಬಳಿಕ ಇಬ್ಬರೂ ಸೇರಿ ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಖದೀಮರ ಚಲನವಲನಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿವೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಜಾನ್ಸನ್ ಮತ್ತು ಸಿಬ್ಬಂದಿ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದೆ. ಸಿಸಿ ಕ್ಯಾಮೆರಾ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login