Connect with us

LATEST NEWS

ಮೂಳೂರು ಬಿಲ್ಲವ ಸಂಘದ ನಾರಾಯಣಗುರು ಮಂದಿರದಲ್ಲಿ ಕಳ್ಳತನ

ಉಡುಪಿ ಫೆಬ್ರವರಿ 4: ಉಡುಪಿಯ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.


ಕಾಪು ತಾಲೂಕು ಮೂಳೂರು ಬಿಲ್ಲವ ಸಂಘದ ನಾರಾಯಣಗುರು ಮಂದಿರದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿಯನ್ನು ಒಡೆದು ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆ ಇಂದು ಬೆಳಗ್ಗೆ ಗೋಚರಕ್ಕೆ ಬಂದಿದೆ.

ಅರ್ಚಕರು ಬೆಳಗ್ಗೆ ಪೂಜೆಗಾಗಿ ಆಗಮಿಸಿದ ವೇಳೆ ಕೃತ್ಯ ತಿಳಿದು ಬಂದಿದೆ. ನಾರಾಯಣ ಗುರು ಸಂಘದ ಪ್ರಮುಖರು ಕಾಪು ಠಾಣೆಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಿದ್ದಾರೆ. ಬೆರಳಚ್ಚು ತಜ್ಞರು ಕಳ್ಳರ ಜಾಡು ಹಿಡಿಯಲು ಮಾಹಿತಿ ಕಲೆ ಹಾಕುತ್ತಿದ್ದಾರೆ.