Connect with us

BANTWAL

ಪೊಲೀಸರನ್ನು ದೂಡಿ ಎಸ್ಕೇಪ್ ಆಗಲು ಯತ್ನಿಸಿದ ಕಳ್ಳನ ಬೆನ್ನಟ್ಟಿ ಹಿಡಿದ ಪೊಲೀಸರು…!!

ಬಂಟ್ವಾಳ ನವೆಂಬರ್ 3: ಮಂಗಳೂರು ಕಾರಾಗೃಹಕ್ಕೆ ವಿಚಾರಾಣಾಧೀನ ಆರೋಪಿಯನ್ನು ಬಸ್ ನಲ್ಲಿ ಕರೆದುಕೊಂಡು ಬರುತ್ತಿರುವ ಸಂದರ್ಭ ಪೊಲೀಸರನ್ನು ದೂಡಿ ಹಾಕಿ ಬಸ್ ನಿಂದ ಹಾರಿ ಪರಾರಿಯಾಗಲು ಯತ್ನಿಸಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. 2003 ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕಳ್ಳಿಗೆ ನಿವಾಸಿ ಗಿರೀಶ್ ಯಾನೆ ಗಿರಿಧರ್ ಆರೋಪಿಯಾಗಿದ್ದು , ಪೋಲೀಸರ ಕರ್ತವ್ಯ ಕ್ಕೆ ಅಡ್ಡಿ ಪಡಿಸಿ ತಲೆಮರೆಸಿಕೊಳ್ಳಲು ಯತ್ನಿಸಿದ ಕಾರಣಕ್ಕಾಗಿ ಈತನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

2003 ರಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರಿಧರ್ ಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸುವ ಸಲುವಾಗಿ ಶಿಕ್ಷಾ ಕೈದಿಯನ್ನು ಸರ್ಕಾರಿ ಬಸ್ ನಲ್ಲಿ ಇಬ್ಬರು ಪೋಲೀಸರು ಬಿಸಿರೋಡಿನಿಂದ ಮಂಗಳೂರಿಗೆ ಸುಮಾರು ‌ 6.30 ಗಂಟೆ ಗೆ ಕರೆದುಕೊಂಡು ಹೋಗುವ ವೇಳೆ ಬ್ರಹ್ಮರಕೋಟ್ಲು ಟೋಲ್ ಗೇಟ್ ನಲ್ಲಿ ಬಸ್ ನಿಧಾನವಾಗುತ್ತಿದ್ದಂತೆ , ನಿರ್ವಾಹಕನಿಗೆ ವಾರೆಂಟ್ ನ್ನು ನೀಡುತ್ತಿರುವ ಸಮಯವನ್ನು ಉಪಯೋಗಿಸಿ ದ ಆರೋಪಿ ಪೋಲೀಸರ ನ್ನು ಬಸ್ ನೊಳಗೆ ದೂಡಿ ಹಾಕಿ ಬಸ್ ನಿಂದ ಹಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಕೂಡಲೇ ಮಿಂಚಿನ ವೇಗದಲ್ಲಿ ಪೋಲೀಸರು ಆರೋಪಿಯನ್ನು ಬೆನ್ನಟ್ಟಿ ಸಾರ್ವಜನಿಕ ರ ಸಹಾಯದಿಂದ ಈತನನ್ನು ಬಂಧಿಸಿದ್ದಾರೆ. ಆರೋಪಿ ಬೆಂಗಾವಲು ಕರ್ತವ್ಯ ಕ್ಕೆ ಅಡ್ಡಿಪಡಿಸಿ ಪರಾರಿಯಾಗಲು ಯತ್ನಿಸಿ ದಕ್ಕಾಗಿ ಈತನ‌ಮೇಲೆ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *