Connect with us

BELTHANGADI

ತೆಕ್ಕಾರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು

ಬೆಳ್ತಂಗಡಿ, ಮೇ 16: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ವಿದ್ಯುತ್ ಕಂಬಕ್ಕೆ ಏರಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಲೈನ್ ಮ್ಯಾನ್ ವಿಕಾಸ್ ಬಾಗಲಕೋಟೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ಚಂಡಮಾರುತದಿಂದ ಈ ಭಾಗದಲ್ಲಿ ಕಳೆದ ಎರಡು ದಿನದಿಂದ ಭಾರಿ ಮಳೆಯಾಗುತ್ತಿದ್ದು ಇದೇ ಸಂದರ್ಭದಲ್ಲಿ ವಿದ್ಯುತ್ ಅಡಚಣೆಉಂಟಾಗಿತ್ತು. ವಿದ್ಯುತ್ ಸರಬರಾಜು ಸರಿಪಡಿಸುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸ್ಥಳೀಯ ಆಡು ಮೇಯಿಸುವರು ಇದನ್ನು ನೋಡಿದ್ದು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.